ಹಣ ಕಾಸು

“ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

4214

ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ  ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

ವಾಸ್ತವದಲ್ಲಿ ನೀವು ಸ್ವಂತ ಮನೆ ಹೊಂದಿಲ್ಲದಿದ್ದರೆ ಈ ಯೋಜನೆ ಅಡಿಯಲ್ಲಿ ಮನೆ ಪಡೆಯಲು ಖಂಡಿತ ಪ್ರಯತ್ನಿಸಿ. ಅದಕ್ಕೆ ಸಂಬಂಧಿಸಿದ ಕೆಲ ಪ್ರಮುಖ ಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ:-

ಜನಸಾಮಾನ್ಯರ ಸ್ವಂತ ಮನೆ ಕನಸು ನನಸು ಮಾಡಲು, ಕೇಂದ್ರ ಸರ್ಕಾರ “ಪ್ರಧಾನ ಮಂತ್ರಿ ಅವಾಸ ಯೋಜನೆ” (Pradhan ,Mantri Awas Yojana) ಪ್ರಾರಂಭಿಸಿದೆ. ಇದರಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ.

ಯಾರೂ ಅರ್ಹರು?                                                                                                                                                                                  ವಾರ್ಷಿಕವಾಗಿ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದ ವರ್ಗದ ಅಡಿಯಲ್ಲಿ ಬರುವ ಹಾಗೂ ವಾರ್ಷಿಕವಾಗಿ 6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಗುಂಪಿನಲ್ಲಿ ಬರುವವರು ಪ್ರಧಾನ ಮಂತ್ರಿ ಅವಾಸ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಈ ವರ್ಗದ ಅಡಿಯಲ್ಲಿ ದೇಶದ ಲಕ್ಷಾಂತರ ಜನರು ಬರುವುದರಿಂದ ತುಂಬಾ ಕುಟುಂಬಗಳಿಗೆ ಸೂರು ಸೌಲಭ್ಯ ಸಿಗಲಿದೆ.

 ಮೂಲ

ಯೋಜನೆಯಿಂದ ಪಡೆಯುವ ಸಬ್ಸಿಡಿ:-                                                                                                                                                                    ವಾರ್ಷಿಕವಾಗಿ ಆದಾಯ ರೂ. 6 ಲಕ್ಷ ಇರುವವರು ಪ್ರಸ್ತುತ ಈ ಸಬ್ಸಿಡಿಯ ಲಾಭವನ್ನು ಪಡೆಯುತ್ತಿದ್ದಾರೆ. ಆದರೆ ಈಗ ಇದರ ಮಿತಿಯನ್ನು 6 ಲಕ್ಷದಿಂದ 18 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅಂದರೆ ಈ ಸಬ್ಸಿಡಿ ಪರಿಮಿತಿಯಲ್ಲಿ ಇದೀಗ ರೂ. 18 ಲಕ್ಷದವರೆಗೆ ಆದಾಯ ಗಳಿಸುವವರು ಫಲಾನುಭವಿಗಳು ಆಗಲಿದ್ದಾರೆ. ವಾರ್ಷಿಕವಾಗಿ ರೂ. 12 ಲಕ್ಷ ಆದಾಯ ಗಳಿಸುತ್ತಿರುವವರು ಮೂಲ ಅಸಲು ರೂ. 9 ಲಕ್ಷದ ಮೇಲೆ ಶೇ. 4ರಷ್ಟು ಬಡ್ಡಿ ಸಬ್ಸಿಡಿ ಪಡೆಯಲಿದ್ದಾರೆ. ಒಂದು ವೇಳೆ ನಿಮ್ಮ ಆದಾಯ ವಾರ್ಷಿಕವಾಗಿ ರೂ. 18 ಲಕ್ಷ ಇದ್ದರೆ ಮೂಲ ಅಸಲು ರೂ. 12 ಲಕ್ಷದ ಮೇಲೆ ಶೇ. 3ರಷ್ಟು ಸಬ್ಸಿಡಿ ಪಡೆಯಬಹುದು.

ಸಾಲದ ಅವಧಿ ಮತ್ತು ಕಟ್ಟಬೇಕಾದ ಕಂತು ಎಷ್ಟು?                                                                                                                                                ಈ ಹಿಂದೆ ಸಾಲದ ಅವಧಿ 15 ವರ್ಷಗಳಾಗಿತ್ತು. ಆದರೆ ಈಗ ಇದನ್ನು 20 ವರ್ಷಗಳಿಗೆ ಹೆಚ್ಚಿಸಲಾಗಿದೆ. 2೦ ವರ್ಷಗಳ ಕಾಲಾವಧಿ ಸಾಲದ ಮೇಲೆ ಶೇ. 9ರ ಬಡ್ಡಿದರದಲ್ಲಿ ಶೇ. 3ರ ಸಬ್ಸಿಡಿ ದರದಲ್ಲಿ ಒಟ್ಟು ರೂ. 2.4 ಲಕ್ಷ ಸಬ್ಸಿಡಿ ಗಳಿಸಬಹುದು. ಅಂದರೆ ಪ್ರತಿ ತಿಂಗಳ ಕಂತುಗಳಲ್ಲಿ ಸರಾಸರಿ ರೂ. 2,200ರವರೆಗೆ ಕಡಿತವಾಗುತ್ತದೆ.

 ಮೂಲ

ಯೋಜನೆ ಅನುಷ್ಠಾನ ಹೇಗೆ?
ಕೇಂದ್ರ ಸರ್ಕಾರದ ಈ ಯೋಜನೆಯನ್ನು ನ್ಯಾಷನಲ್ ಹೌಸಿಂಗ್ ಬ್ಯಾಂಕ್ (NHB) ಮತ್ತು ಹುಡ್ಕೊ(HUDCO) ಸಂಸ್ಥೆಗಳು ಕಾರ್ಯಗತಗೊಳಿಸಲಿವೆ.

ಕೇಂದ್ರ ಸರ್ಕಾರದ ಈ ಯೋಜನೆಯ ಗುರಿ                                                                                                                                                            ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ ಯೋಜನೆಯಡಿ ಸೂರು ಕಲ್ಪಿಸಲು 26 ರಾಜ್ಯಗಳ 2,508 ನಗರಗಳನ್ನು ಆಯ್ಕೆ ಮಾಡಲಾಗಿದೆ. 7 ವರ್ಷಗಳ ಕಾಲಮಿತಿಯಲ್ಲಿ 2 ಕೋಟಿ ಮನೆಗಳನ್ನು ಕಟ್ಟಿಸುವ ಯೋಜನೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…

  • ತಂತ್ರಜ್ಞಾನ

    ಪರೀಕ್ಷಾರ್ಥ ಉಡಾವಣೆಯಲ್ಲಿ ಕೊನೆಗೂ ಯಶಸ್ವಿಯಾದ ನಿರ್ಭಯ್ ಕ್ಷಿಪಣಿ..!ತಿಳಿಯಲು ಇದನ್ನು ಓದಿ …

    ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು.

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…