ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ.
ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ ಲಾಭ ಗಳಿಸುತ್ತಿದ್ದಾರೆ.
ಬರಗಾಲದಿಂದ ಬೆಳೆಗಳು ಕೈಕೊಟ್ಟಾಗ ಹೈನುಗಾರಿಕೆ ಮೊರೆಹೋದ ರೋಜಾ, ಹಸು ಸಾಕಾಣಿಕೆ ಮೂಲಕ ತಮ್ಮ ತೋಟದ ಮನೆಯ ಪಕ್ಕದ ಶೆಡ್ ಒಂದರಲ್ಲಿ ಸುಮಾರು 200 ಕ್ಕೂ ಹೆಚ್ಚು ಹಸುಗಳನ್ನ ಸಾಕಿದ್ದಾರೆ. ಹಸುಗಳಿಗೆ ಸಮಯಕ್ಕೆ ಸರಿಯಾಗಿ ಒಣ ಹಾಗೂ ಹಸಿರು ಮೇವು, ಬೂಸಾ ಸೇರಿದಂತೆ ಪೌಷ್ಠಿಕ ಆಹಾರವನ್ನ ಕೊಟ್ಟು ತಮ್ಮ ಮಕ್ಕಳಂತೆ ಹಸುಗಳನ್ನ ಆರೋಗ್ಯವಾಗಿ ನೋಡಿಕೊಳ್ಳುತ್ತಿದ್ದಾರೆ.
ರೋಜಾ ಅವರು ತಮ್ಮ ಎರಡು ಎಕರೆ ಜಮೀನಿನಲ್ಲಿ ಹಸುವಿನ ಸಗಣಿಯನ್ನ ಗೊಬ್ಬರವನ್ನಾಗಿ ಬಳಸಿಕೊಂಡು ಹಸಿ ಮೇವನ್ನ ಬೆಳೆದು ಹಸುಗಳಿಗೆ ಬೇಕಾದ ಪೌಷ್ಟಿಕಾಂಶವುಳ್ಳ ಆಹಾರ ನೀಡುತ್ತಿದ್ದಾರೆ. ಹಸುಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಅವುಗಳ ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮ್ಮೆ ಪಶು ವೈದ್ಯರನ್ನ ಕರೆಸಿ ತಪಾಸಣೆ ಮಾಡಿಸಿ ಚಿಕಿತ್ಸೆ ಕೋಡಿಸುತ್ತಿದ್ದಾರೆ. ಗೋವುಗಳ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.
ಹೀಗಾಗಿ ಇವರ ಸಾಧನೆಯನ್ನು ಗಮನಿಸಿದ ಭಾರತೀಯ ಹೈನುಗಾರಿಕೆ ಇಲಾಖೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಭೀಕರ ಬರದಿಂದ ತತ್ತರಿಸಿ ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ನಡುವೆ ನೂತನ ತಂತ್ರಜ್ಞಾನದ ಜೊತೆಗೆ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಹೈನುಗಾರಿಕೆ ಮಾಡಿ ಲಕ್ಷಾಂತರ ರೂಪಾಯಿ ಸಂಪಾದಿಸಿರುವ ಈ ಮಹಿಳೆ ದೇಶಕ್ಕೆ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…