ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ.

ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ 11 ಸಾವಿರ ಹೆರಿಗೆ ಆಗಲಿದೆಎಂದು ಅಂದಾಜಿಸಲಾಗಿದ್ದು, ಸುಮಾರು 30 ಸಾವಿರ ಲೀಟರ್ ಹಾಲುಬೇಕಾಗುತ್ತದೆ.

ಬಿಬಿಎಂಪಿ ಆಸ್ಪತ್ರೆಗಳಿಗೆ ಬರುವವರ ಸಂಖ್ಯೆ ಹೆಚ್ಚಿಸುವ ಸಲುವಾಗಿ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಪಿಂಕ್ ಬೇಬಿ ಹೆಸರಿನಲ್ಲಿ ಬಿಬಿಎಂಪಿ ಹೆರಿಗೆ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣು ಮಗುವಿನ ಹೆಸರಿನಲ್ಲಿ 1 ಲಕ್ಷರೂ. ಬಾಂಡ್ ನೀಡಲಾಗುತ್ತಿದೆ. ಇದೀಗ ಹಾಲು ಯೋಜನೆ ಆರಂಭಿಸಲಿದೆ. 15 ಲಕ್ಷರೂ. ವೆಚ್ಚ 10 ವರ್ಷಗಳ ಹಿಂದೆ ಬಾಣಂತಿಯರಿಗೆ ಹಾಲು ನೀಡುವ ವ್ಯವಸ್ಥೆ ಜಾರಿಯಲ್ಲಿತ್ತು.ಆದರೆ, ಕಾರಣಾಂತರಗಳಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಹಾಲು ನೀಡುವುದನ್ನು ಆರಂಭಿಸಲಾಗುತ್ತಿದೆ. ವಾರ್ಷಿಕ 30 ಸಾವಿರ ಲೀಟರ್ ಹಾಲು ಬೇಕಾಗಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.ಅದಕ್ಕಾಗಿ 15 ಲಕ್ಷ ರೂ. ವ್ಯಯಿಸಲು ನಿರ್ಧರಿಸಿದ್ದಾರೆ.

ಹಾಲು ವಿತರಣೆ ಹೇಗೆ?: ಹಾಲು ಪೂರೈಕೆ ಮಾಡುವ ಸಂಸ್ಥೆಯ ಡೇರಿಗಳಿಗೆ ಬಿಬಿಎಂಪಿ ಆಸ್ಪತ್ರೆಗಳಲ್ಲಾಗುವ ಹೆರಿಗೆಗಳು ಮತ್ತು ಬಾಣಂತಿಯರ ಸಂಖ್ಯೆಯನ್ನು ತಿಳಿಸಲಾಗುತ್ತದೆ. ಆ ದಿನ ಎಷ್ಟು ಹಾಲು ಪೂರೈಸಬೇಕು ಎಂಬುದನ್ನು ಅದರಲ್ಲಿ ಹೇಳಲಾಗುತ್ತದೆ. ಹೀಗೆ ಸಂಸ್ಥೆ ಪೂರೈಸುವ ಹಾಲನ್ನು ಆಸ್ಪತ್ರೆಗಳಲ್ಲಿ ಕಾಯಿಸಿ ಬಾಣಂತಿಯರಿಗೆ ನೀಡಲಾಗುತ್ತದೆ. ತಿಂಗಳಾಂತ್ಯಕ್ಕೆ ಪೂರೈಕೆಯಾದ ಹಾಲಿನ ಪ್ರಮಾಣವನ್ನು ಗಮನಿಸಿಕೊಂಡು ಹಣ ಬಿಡುಗಡೆ ಮಾಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…