ಸುದ್ದಿ

ಬಾಲಿವುಡ್​ಗೆ ಸೈ ಕನ್ನಡಕ್ಕೆ ಜೈ: ಈ ಬಾರಿಯ ಬಿಗ್ ಬಾಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಸಲ್ಮಾನ್ ಖಾನ್‌?

25

‘ಬಿಗ್‌ಬಾಸ್‌’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್‌ಗಾಗಿ ಅನೇಕರು ಬಿಗ್‌ಬಾಸ್‌ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್‌ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ!

ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್‌ಬಾಸ್’ ಪ್ರೆಸ್‌ಮೀಟ್‌ನಲ್ಲಿ ಸಲ್ಮಾನ್‌ ಆಗಮನದ ಬಗ್ಗೆ ಸುದೀಪ್‌ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್‌ಬಾಸ್‌ನ ಬೇರೆ ಬೇರೆ ಆವೃತ್ತಿಗಳ ಶೂಟಿಂಗ್‌ನಲ್ಲಿ ಬಿಜಿ ಆಗಿರುತ್ತೇವೆ. ಅವರಿಲ್ಲಿ ಬರಲು ಸಾಧ್ಯವಿಲ್ಲ’ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಆದರೆ, ಒಂದು ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಅದೇನೆಂದರೆ, ಕನ್ನಡದ ಬಿಗ್‌ಬಾಸ್‌ಗೆ ಸುದೀಪ್ ನಿರೂಪಕರಾದರೆ, ಹಿಂದಿ ಬಿಗ್‌ಬಾಸ್‌ಗೆ ಸಲ್ಮಾನ್‌ ನಿರೂಪಕರು. ಸದ್ಯ ಅವರ ಸಾರಥ್ಯದಲ್ಲೀಗ ಬಿಗ್‌ಬಾಸ್‌ ಸೀಸನ್ 13 ಆರಂಭಗೊಂಡಿದೆ. ಇಬ್ಬರಿಗೂ ಬಿಗ್‌ಬಾಸ್‌ ವೇದಿಕೆ ಹೊಸದೇನಲ್ಲ.

ಜತೆಗೆ ‘ದಬಾಂಗ್ 3’ ಚಿತ್ರದ ಮೂಲಕ ಸಲ್ಮಾನ್‌ ಖಾನ್‌ ಚೊಚ್ಚಲ ಬಾರಿಗೆ ಕನ್ನಡಕ್ಕೂ ಕಾಲಿಡಲಿದ್ದಾರೆ. ಹೌದು, ಆ ಚಿತ್ರ ಕನ್ನಡಕ್ಕೆ ಡಬ್ ಆಗಿ ಡಿ.20ಕ್ಕೆ ತೆರೆಕಾಣಲಿದೆ. ಅದರಲ್ಲಿ ಸಲ್ಮಾನ್‌ ಜತೆ ಸುದೀಪ್ ಕೂಡ ನಟಿಸಿದ್ದಾರೆ. ಒಂದುವೇಳೆ, ಸಲ್ಮಾನ್‌ ಕನ್ನಡ ಬಿಗ್‌ಬಾಸ್‌ಗೆ ಬಂದರೆ ಸಿನಿಮಾಕ್ಕೆ ಸಾಕಷ್ಟು ಲಾಭಗಳಿವೆ ಎಂಬುದು ಕನ್ನಡದ ಅಭಿಮಾನಿಗಳ ಲೆಕ್ಕಾಚಾರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಜ್ಯೋತಿಷ್ಯ

    ಶನಿವಾರದ ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶನಿವಾರ, 24/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಆರೋಗ್ಯದ ಕಡೆಗೆ ಗಮನ ಇರಲಿ. ಮನೆಯಲ್ಲಿ ಸಮಾಧಾನದ ವಾತಾವರಣ. ಬಂಧುಗಳೊಡನೆ ಆಕಸ್ಮಿಕ ಪ್ರಯಾಣ. ಆಗಾಗ ಸಂಚಾರ. ಯೋಗ್ಯ ವಯಸ್ಕರಿಗೆ ಮದುವೆ ಯೋಗ. ಗ್ರಹಸ್ಥಿತಿಗಳು ಉತ್ತಮವಾಗಿರುವುದರಿಂದ ಪ್ರತಿದಿನವೂ ಸಂತೋಷ. ಆಸ್ತಿ ವಿವಾದ. ಮಕ್ಕಳು ಮತ್ತು ಮಡದಿಯೊಂದಿಗೆ ಸಂತಸ. ವೃಷಭ:- ದೂರದ ಪ್ರಯಾಣ ಸಾಧ್ಯತೆ. ವಸ್ತ್ರಾಭರಣಗಳ ಖರೀದಿ. ಕಲಹಾದಿಗಳಿಂದ ಕಿರಿಕಿರಿ. ಮಕ್ಕಳ ಬಗ್ಗೆ ಗಮನ ಇರಲಿ. ಧರ್ಮಬಾಹಿರ ಕೆಲಸಗಳ ಬಗ್ಗೆ ಆಸಕ್ತಿ.ನಿಮ್ಮ ಆರೋಗ್ಯದ ಬಗ್ಗೆ ಜಾಗ್ರತೆ ಇಎಅಲಿ….