ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ.
ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ ವಿನ್ನರ್ ಶಶಿಕುಮಾರ್ 50 ಲಕ್ಷ ರೂಪಾಯಿ ಮತ್ತು ಆಕರ್ಷಕ ಟ್ರೋಫಿಯನ್ನ ತಮ್ಮದಾಗಿಸಿಕೊಂಡರು.
ಸೀಸನ್ -6ರ 12ನೇ ಕಂಟೆಸ್ಟೆಂಟ್ ಆಗಿ ಶಶಿ ಬಿಗ್ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದರು. ಮಾಡರ್ನ್ ರೈತ ಅಂತಾನೇ ಫೇಮಸ್ ಆಗಿದ್ದ ಇವರು, ಎಲ್ಲಾ ಟಾಸ್ಕ್ಗಳನ್ನ ಕೂಡ ಚೆನ್ನಾಗಿಯೇ ಮಾಡಿದ್ದರು. ಹೀಗಾಗಿ, ರೈತನೊಬ್ಬ ಮೊದಲ ಬಾರಿಗೆ ಬಿಗ್ ಬಾಸ್ ಗೆಲ್ತಾನೆ ಅನ್ನೋ ಮಾತು ಕೇಳಿ ಬಂದಿತ್ತು. ಅದರಂತೆ ಶಶಿಕುಮಾರ್ ಬಿಗ್ಬಾಸ್ ಸೀಜನ್ -6 ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ.
ಬಿಗ್ಬಾಸ್ ಮನೆಯೊಳಗೆ ಎಂಟ್ರಿ ನೀಡಿದ್ದ 20 ಮಂದಿಯಲ್ಲಿ ಕೊನೆಗೆ ಮೂವರು ಉಳಿದಿದ್ರು. ಕವಿತಾ ಮೊದಲು ಮನೆಯಿಂದ ಹೊರಬಂದರು. ಶಶಿ, ನವೀನ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಗಾಯಕ ನವೀನ್ ಸಜ್ಜು ಅವರೇ ವಿನ್ ಆಗುತ್ತಾರೆ ಅನ್ನೋ ಅಭಿಪ್ರಾಯ ಬಹುತೇಕರಲ್ಲಿತ್ತು. ಆದ್ರೆ ಅದು ಸುಳ್ಳಾಗಿದೆ. ಮಾಡರ್ನ್ ರೈತ ಶಶಿ ಬಿಗ್ಬಾಸ್ ವಿನ್ನರ್ ಆಗಿದ್ದಾರೆ. ಈ ಸಂಬಂಧ ಸೋಶಿಯಲ್ ಮಿಡಿಯಾದಲ್ಲಿ ಭಾರೀ ಚರ್ಚೆ ನಡೆದಿದೆ. ಶಶಿ ಬಿಗ್ಬಾಸ್ ವಿನ್ನರ್.. ನವೀನ್ ಸಜ್ಜು ಜನರ ದಿಲ್ದಾರ್ ಎಂಬ ಡೈಲಾಗ್ ಹೊರಬೀಳುತ್ತಿವೆ.
ಬಿಗ್ ಬಾಸ್ ಸೀಸನ್ 1 ರಲ್ಲಿ ನಟ ವಿಜಯ್ ರಾಘವೇಂದ್ರ, ಸೀಸನ್ 2ರಲ್ಲಿ ನಿರೂಪಕ ಅಕುಲ್ ಬಾಲಾಜಿ, ಸೀಸನ್ 3 ರಲ್ಲಿ ನಟಿ ಶೃತಿ, ಸೀಸನ್ 4 ರಲ್ಲಿ ನಿರ್ದೇಶಕ ಪ್ರಥಮ್, ಸೀಸನ್ 5 ರಲ್ಲಿ ಗಾಯಕ ಚಂದನ್ ಶೆಟ್ಟಿ ಹಾಗೂ ಸೀಸನ್ 6ರಲ್ಲಿ ಮಾಡರ್ನ್ ರೈತ ಶಶಿಕುಮಾರ್ ವಿಜೇತರಾದಂತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಸ್ಯಾಂಡಲ್ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…