ಸರ್ಕಾರದ ಯೋಜನೆಗಳು

ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

9277

ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.

ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ  50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…