ಸುದ್ದಿ

ಬೀಳುವ ಹಂತದಲ್ಲಿ ಶಿಥಿಲಗೊಂಡಿದ್ದ ಸರ್ಕಾರೀ ಶಾಲೆಯ ಅಭಿವೃದ್ಧಿಗೆ ಮುಂದಾದ ಸಂಸದ ಜಿಸಿ ಚಂದ್ರಶೇಖರ್..!

59

ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ..

ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ. ಹೆಣ್ಣು ಮಕ್ಕಳು ಶೌಚಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಶಾಲೆಯ ಆವರಣದಲ್ಲಿರುವ ಶಿಥಿಲಗೊಂಡ ಕಟ್ಟಡ ತೆರವುಗೊಳಿಸದೆ ಇರುವ ಪರಿಣಾಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಥಿಲಗೊಂಡಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆಯ ನವೀಕರಣ ಕಾರ್ಯಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಳ್ಳುತ್ತಲೇ ಇದ್ದರೂ ಯಾವೊಬ್ಬ ರಾಜಕಾರಣಿಗಳು ಕೂಡ ಇತ್ತ ಗಮನ ಹರಿಸಿರಲಿಲ್ಲ. ಇದೀಗ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಶಾಲೆಯ ಪುನರ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ..

ಮೂಲ ಭೂತ ಸೌಕರ್ಯಗಳು ಇಲ್ಲದ ಈ ಶಾಲೆಯನ್ನು ಪುನರ್ ನಿರ್ಮಾಣ ಮಾಡಿ ಮಾದರಿ ಶಾಲೆಯನ್ನಾಗಿ ಮಾಡಲು ಸಂಸದ ಜಿಸಿ ಚಂದ್ರಶೇಖರ್ ನಿರ್ಧರಿಸಿದ್ದಾರೆ. ಈ ಕಾರ್ಯಕ್ಕಾಗಿ ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ತೀರ್ಮಾನಿಸಿದ್ದು ಈ ನಿರ್ಬಂಧಗಳನ್ನು ಹೊರಡಿಸುವಂತೆ ಜಿ.ಸಿ.ಚಂದ್ರಶೇಖರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರೀ ಶಾಲೆಗಳ ಉಳಿವಿಗೆ ಕೈ ಜೋಡಿಸಿದ್ದಾರೆ. 


ಇನ್ನು ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೂಡ ಬರೆದುಕೊಂಡಿರುವ ಸಂಸದರು “ಬೆಂಗಳೂರು ಕೇಂದ್ರ ಭಾಗದಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರ , ಸೋಶಿಯಲ್ ಮೀಡಿಯಾದಲ್ಲಿ ಕಂಡ ಗೆಳೆಯ ಸಯ್ಯದ್ ಹುಸೆನ್ನ್ ನನ್ನ ಗಮನಕ್ಕೆ ತಂದಿದ್ದು , ಈ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡಲು ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ನಿರ್ಧರಿಸಿದ್ದೇನೆ.” ಎಂದು ಟ್ವೀಟ್ ಮಾಡಿದ್ದಾರೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಸುದ್ದಿ

    ಪಡಿತರ ಚೀಟಿ ಇಲ್ಲದವರಿಗೂ ‘ಶುಭ ಸುದ್ದಿ’ ನೀಡಿದ ಸಿಎಂ ಯಡಿಯೂರಪ್ಪ…!

    ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ  1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….

  • ಆರೋಗ್ಯ

    ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

    ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

    ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.