ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ ಬಿದ್ದಿದ್ದಾನೆ.

ಸರಿಸುಮಾರು 7 ಇಂಚು ಅಗಲವಿರುವ ಈ ಕೊಳವೆ ಬಾವಿಯನ್ನು ಬಟ್ಟೆಯಿಂದ ಮುಚ್ಚಲಾಗಿತ್ತು. ಇದನ್ನು ಗಮನಿಸದ ಬಾಲಕ ಆಟವಾಡುತ್ತಾ ಅದರ ಒಳಗಡೆ ಬಿದ್ದಿದ್ದಾನೆ. ಇದನ್ನು ಗಮನಿಸಿದ ತಾಯಿ ಬಾಲಕನನ್ನು ರಕ್ಷಿಸಲು ಮುಂದಾದ್ರೂ ವಿಫಲರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆ ಬಳಿಕ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಸುಮಾರು 5 ದಿನಗಳಿಂದ ರಕ್ಷಣಾ ಕಾರ್ಯ ನಡೆದಿದ್ದು, ಇಂದು ಬಾಲಕನನ್ನು ಬೋರ್ ವೆಲ್ ಒಳಗಡೆಯಿಂದ ರಕ್ಷಿಸಲಾಯಿತು. ಕೂಡಲೇ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಆ ರಾಜ್ಯದಲ್ಲಿ ಚಾಪರ್ ನಿಲುಗಡೆ ಮಾಡಲು ಸಾಧ್ಯವಿಲ್ಲವಾಯಿತು. ಹೀಗಾಗಿ ಬಾಲಕನನ್ನು ರಸ್ತೆ ಮಾರ್ಗವಾಗಿ 140 ಕೀ.ಮಿ ತೆರಳಿ ಆಸ್ಪತ್ರೆಗೆ ದಾಖಲಿಸಲಾಯಿತು. ಘಟನೆ ಸಂಬಂಧ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಟ್ವೀಟ್ ಮಾಡಿ, ಸಂತಾಪ ಸೂಚಿಸಿದ್ದಾರೆ. ದೇವರು ಆತನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

ಕಳೆದ ರಾತ್ರಿ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಸ್ಥಳೀಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದರು. ಇದೇ ವೇಳೆ ಅಲ್ಲಿನ ಮುಖ್ಯಮಂತ್ರಿಗಳು ಕೂಡ ವಿರೋಧ ಪಕ್ಷಗಳು ಕಾರ್ಯಾಚರಣೆಯನ್ನು ತಡಮಾಡುತ್ತವೆ ಎಂದು ಆರೋಪಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…