ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್ಇಡಿ ಸ್ಕ್ರೀನ್ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…