ಸಿನಿಮಾ

ಭಾರತೀಯ ಚಿತ್ರರಂಗದ ಮೊದಲ ಮಹಿಳಾ ಸೂಪರ್ಸ್ಟಾರ್ ಇನ್ನಿಲ್ಲ…

336

ಬಾಲಿವುಡ್‍ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

1963ರ ಆಗಸ್ಟ್ 13 ರಂದು ತಮಿಳು ನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ ತಮ್ಮ 4ನೇ ವಯಸ್ಸಿನಲ್ಲಿ 1969 ರಲ್ಲಿ ಬಾಲನಟಿಯಾಗಿ ತಮಿಳಿನ ತುನೈವನ್ ಸಿನಿಮಾದಲ್ಲಿ ನಟಿಸಿದ್ದರು. 1971ರಲ್ಲಿ ಮಲೆಯಾಳಂನ ಪೂಂಪಟ್ಟಾ ಚಿತ್ರದಲ್ಲಿ ನಟಿಸಿದ್ದ ಶ್ರೀದೇವಿ ಅವರಿಗೆ ಅತ್ಯುತ್ತಮ ಬಾಲನಟಿ ಪ್ರಶಸ್ತಿ ಸಿಕ್ಕಿತ್ತುಅದಾದ ನಂತರ 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್‍ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು.

ಕನ್ನಡದಲ್ಲಿ ನಟಿಸಿದ್ದ ಚಿತ್ರಗಳು:-

ಕನ್ನಡದ ಭಕ್ತಕುಂಬಾರ, ಬಾಲಭಾರತ, ಹೆಣ್ಣು ಸಂಸಾರದ ಕಣ್ಣು, ಯಶೋಧ ಕೃಷ್ಣ, ಸಂಪೂರ್ಣ ರಾಮಯಣ, ಪ್ರಿಯಾದಲ್ಲಿ ನಟಿಸಿದ್ದರು. ರೆಬಲ್ ಸ್ಟಾರ್ ಅಂಬರೀಶ್, ರಜನಿಕಾಂತ್ ಜೊತೆ ಅಭಿನಯಿಸಿದ್ದ ಶ್ರೀದೇವಿ 80ರ ದಶಕದಲ್ಲಿ ಬಾಲಿವುಡ್ ಪ್ರಸಿದ್ಧ ಕಲಾವಿದೆಯಾಗಿ ಮಿಂಚಿದ್ದರು.

ಕಾರಣ :-

ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಪುತ್ರಿ ಖುಷಿ ಜೊತೆ ಸಂಬಂಧಿಕರ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ದುಬೈಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ.

ಇನ್ನು ಶ್ರೀದೇವಿ  ಅವರಿಗೆ 2013 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಪರಸ್ಕರಿಸಲಾಗಿತ್ತು. 5 ಬಾರಿ ಫಿಲಂ ಫೇರ್ ಪ್ರಶಸ್ತಿ ಪಡೆದಿದ್ದ ಶ್ರೀದೇವಿ ಅವರಿಗೆ ಲೆಕ್ಕವಿಲ್ಲದಷ್ಟು ಪ್ರಶಸ್ತಿ ಪುರಸ್ಕಾರಗಳು ದೊರೆತಿದ್ದವು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ