ದೇಶ-ವಿದೇಶ

“ಭಾರತೀಯ ಸೇನೆ”ಗೆ ಶೀಘ್ರವೇ ಬರಲಿದೆ “ಸ್ವದೇಶಿ ಬುಲೆಟ್‌ ಪ್ರೂಫ್‌ ಜಾಕೆಟ್‌”………

322

ಹೌದು, ಪತ್ರಿಕೆಯೊಂದು ವರದಿ ಮಾಡಿರುವಂತೆ, ಪ್ರಸ್ತುತ ಭಾರತೀಯ ಸೇನೆಗೆ ಅಮೆರಿಕದಿಂದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ತರಿಸಿಕೊಳ್ಳಲಾಗುತ್ತಿದ್ದು, ಇದೀಗ ಈ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಇನ್ನು ಮುಂದೆ ಭಾರತದಲ್ಲೇ ತಯಾರಿಸಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ‘ಮೇಕ್‌ ಇನ್‌ ಇಂಡಿಯಾ’ ಮಂತ್ರ ಜಪಿಸುತ್ತಿರುವಾಗಲೇ ಬಂಗಾಳಿ ವಿಜ್ಞಾನಿಯೊಬ್ಬರು ಕಡಿಮೆ ಬೆಲೆಯ, ಅತ್ಯಂತ ಕಡಿಮೆ ತೂಕದ ಸ್ವದೇಶಿ ‘ಬುಲೆಟ್‌ಪ್ರೂಫ್‌’ ಜಾಕೆಟ್‌ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.

 

ಇದರ ಬಳಕೆಗೆ ರಕ್ಷಣಾ ಸಚಿವಾಲಯದ ಉನ್ನತಾಧಿಕಾರ ಸಮಿತಿ ಕೂಡ ಒಪ್ಪಿಗೆ ಸೂಚಿಸಿದೆ. ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ಪ್ರೂಫ್‌ ಜಾಕೆಟ್‌ ಅನ್ನು ಧರಿಸಲು ದಾರಿ ಸುಗಮವಾಗಿದೆ.

ಕೇಂದ್ರ ಸರ್ಕಾರಕ್ಕೆ ಹೇಗೆ ಉಳಿತಾಯ ?

ಇನ್ನು ಈ ಬುಲೆಟ್ ಪ್ರೂಫ್ ಜಾಕೆಟ್ ಗಳು ಕಡಿಮೆ ವೆಚ್ಚದ್ದಾಗಿದ್ದು, ಒಂದು ಜಾಕೆಟ್ ನಿರ್ಮಾಣಕ್ಕೆ ಕೇವಲ 50 ಸಾವಿರ ರು. ವೆಚ್ಚ ತಗುಲುತ್ತದೆ. ಆದರೆ ಅಮೆರಿಕದ ಜಾಕೆಟ್ ಗಳಿಗೆ 1.50 ಲಕ್ಷ ರು. ವೆಚ್ಚವಾಗುತ್ತಿದೆ. ಜತೆಗೆ ಒಂದು ಕವಚ 15ರಿಂದ 18 ಕೆ.ಜಿ.ವರೆಗೂ ತೂಕವಿದೆ. ಇಷ್ಟು ಮಣ ಭಾರದ ಜಾಕೆಟ್‌ ಧರಿಸಿ ಉಗ್ರರ ಜತೆ ಕಾದಾಡಬೇಕಾದ ಪರಿಸ್ಥಿತಿ ಯೋಧರಿಗಿದೆ.

ಇದನ್ನು ಮನಗಂಡ ಬಂಗಾಳಿ ವಿಜ್ಞಾನಿ ಪ್ರೊ| ಶಂತನು ಭೌಮಿಕ್‌ ಅತ್ಯಂತ ಕಡಿಮೆ ತೂಕದ, ಥರ್ಮೋ ಪ್ಲಾಸ್ಟಿಕ್‌ ಜಾಕೆಟ್‌ ಅನ್ನು ಅಭಿವೃದ್ಧಿಪಡಿ ಸಿದ್ದಾರೆ. ಈ ಜಾಕೆಟ್‌ ಬೆಲೆ 50 ಸಾವಿರ ವಿರಲಿದ್ದು, ತೂಕ 1.5 ಕೆ.ಜಿ.ಯಿರಲಿದೆ.

ಇದರಿಂದಾಗಿ 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಯೋಧರು ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಬುಲೆಟ್‌ ಪ್ರೂಫ್‌  ಜಾಕೆಟ್‌ ಅನ್ನು ಧರಿಸಲು ಹಾದಿ ಸುಗಮವಾದಂತಾಗಿದೆ. ಜತೆಗೆ ರಕ್ಷಣಾ ಇಲಾಖೆಯ ಬೊಕ್ಕಸಕ್ಕೆ ಪ್ರತಿ ವರ್ಷ 20 ಸಾವಿರ ಕೋಟಿ ರು. ಉಳಿತಾಯವಾಗಲಿದೆ.

ಯಾರೂ ಗೊತ್ತಾ ವಿಜ್ಞಾನಿ ಶಾಂತನು ಭೌಮಿಕ್ ?

ಪ್ರಸ್ತುತ ಭಾರತೀಯ ಯೋಧರಿಗೆ ಅಗ್ಗದ ಮತ್ತು ಕಡಿಮೆ ತೂಕದ ಬುಲೆಟ್ ಪ್ರೂಫ್ ಜಾಕೆಟ್ ಗಳನ್ನು ಸಂಶೋಧಿಸಿರುವ, ವಿಜ್ಞಾನಿ ಶಾಂತನು ಭೌಮಿಕ್ ಮೂಲತಃ ಬಂಗಾಳ ಮೂಲದವರಾಗಿದ್ದು, ಪ್ರಸ್ತುತ ಕೊಯಮತ್ತೂರಿನ ಅಮೃತ ವಿಶ್ವವಿದ್ಯಾಲಯದಲ್ಲಿ ಏರೇಸ್ಪೇಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.  ತಮ್ಮ ವಿನೂತನ ಸಂಶೋಧನೆಯನ್ನು ವಿಜ್ಞಾನಿ ಶಾಂತನು ಭೌಮಿಕ್ ಅವರು ನೇತಾಜಿ ಸುಭಾಷ್ ಚಂದ್ರಬೋಸ್ ಅವರಿಗೆ ಸಮರ್ಪಿಸಿದ್ದಾರೆ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.