ಸುದ್ದಿ

ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

70

ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಜನ ಆಯ್ದ ಪ್ರತಿನಿಧಿಗನ್ನು ಹೊಂದಿರಬೇಕು. ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡಲು ತಾಲೂಕು ಮಟ್ಟದ ಸಮಿತಿಯನ್ನು ರಚಿಸಲು ಸೂಚಿಸಿದ್ದು ಈ ಸಮಿತಿಯಲ್ಲಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಅಧ್ಯಕ್ಷರಾಗಿದ್ದು, ತಾಲೂಕು ಮಟ್ಟದ ವೈದಾಧಿಕಾರಿ, ಸಮುದಾಯಾಧಾರಿತ ಪ್ರತಿನಿಧಿ (ಜಿಲ್ಲಾ ನಾಮ ನಿರ್ದೇಶಿತರಾದವರು), ಸಂಬಂಧಿತ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸದಸ್ಯರಾಗಿರುತ್ತಾರೆ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿಯು ಅತ್ಯಂತ ಪ್ರಮುಖವಾದ ದಾಖಲೆಯಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡು ಇತರ ಸೌಲಭ್ಯಗಳಿಗೆ ಅಗತ್ಯವಾದ ಪಡಿತರ ಚೀಟಿ, ಆಧಾರ್ ಕಾರ್ಡ್‍ಗಳನ್ನು ಕೂಡಾ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿ:
ದಮನಿತ ಮಹಿಳೆಯರ ಜಿಲ್ಲಾ ಮಟ್ಟದ ಕೋಶ/ಸಮಿತಿಯಲ್ಲಿ ದಮನಿತ ಮಹಿಳೆಯರ ನಿಸ್ಸಹಾಯಕತೆಯನ್ನು ಹೋಗಲಾಡಿಸಿ ಅವರ ಜೀವನ ಮಟ್ಟ ಸುಧಾರಣೆ ಮಾಡಲು 21 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ತಿಳಿಸಿದರು. ವಿವಿಧ ಕಡೆಗಳಲ್ಲಿರುವ ದಮನಿತ ಮಹಿಳೆಯರನ್ನು ಗುರುತಿಸಿ ಅವರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಚೇತನಾ ಮಹಿಳಾ ಸಂಘವನ್ನು ಸಮುದಾಯಾಧಾರಿತ ಸಂಸ್ಥೆಯಾಗಿ ಆಯ್ಕೆ ಮಡಿದ್ದು, ಸದ್ರಿ ಸಂಸ್ಥೆಯು ಪ್ರಸ್ತುತ ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸದೇ ಇರುವುದರಿಂದ ಹಿಂದ್ ಕುಷ್ಟ್ ನಿವಾರಣ್ ಸಂಘ ಇವರನ್ನು ಆಯ್ಕೆ ಮಾಡುವಂತೆ ಪ್ರಧಾನ ಕಛೇರಿಗೆ ಪ್ರಸ್ತಾವನೆಯನ್ನು ಸಲ್ಲಿಸಲು  ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಪೊಲೀಸ್ ಆಯುಕ್ತರ ಪರವಾಗಿ  ಅಮಣಿ, ಮಹಿಳಾ ಪೊಲೀಸ್ ಸಬ್‍ಇನ್ಸ್ಪೆಕ್ಟರ್, ಮಂಗಳೂರು, ಪೊಲೀಸ್ ಅಧಿಕ್ಷಕರ ಪರವಾಗಿ, ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಡಾI ಸಿಕಂದರ್ ಪಾಶಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ, ಡಾI ರಾಜೇಶ್ವರಿ, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಂಗಳೂರು, ಯೋಜನಾ ನಿರ್ದೇಶಕರು, ನಗರಾಭಿವೃದ್ಧಿ ಕೋಶ, ಮಂಗಳೂರು, ಉಪನಿರ್ದೇಶಕರು, ಸಆರ್ವಜನಿಕ ಶಿಕ್ಷಣ ಇಲಾಖೆ, ಮಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಂಗಳೂರು,   ರೆನ್ನಿ ಡಿಸೋಜ, ಅಧ್ಯಕ್ಷರು ಮಕ್ಕಳ ಕಲ್ಯಾಣ ಸಮಿತಿ, ಮಂಗಳೂರು, ನವಸಹಜ ಸಮುದಾಯ ಸಂಘಟನೆಯ ಪ್ರತಿನಿಧಿಗಳು, ಪರಿವರ್ತನಾ ಚಾರಿಟೇಬಲ್ ಟ್ರಸ್ಟ್‍ನ ಪ್ರತಿನಿಧಿಗಳು ಹಾಗೂ ಹಿಂದ್ ಕುಷ್ಟ್ ನಿವಾರಣ್ ಸಂಘದ ಪ್ರತಿನಿಧಿಗಳು ಹಾಜರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಸುದ್ದಿ

    ಕೆಲವು ವಸ್ತುಗಳ ಬೆಲೆ ಏರಿಕೆ ! ಕೆಲವು ವಸ್ತುಗಳ ಬೆಲೆ ಇಳಿಕೆ! ಮೋದಿ ಬಜೆಟ್​ ಏನೇನಿದೆ ಗೊತ್ತಾ…ತಿಳಿಯಿರಿ?

    ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್​ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.