ಸುದ್ದಿ

ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

199

ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು ಕಾಣದಿದ್ದಾಗ ಗಾಬರಿಗೊಂಡು ಎಲ್ಲ ಕಡೆ ಹುಡುಕಿದ್ದಾರೆ. ಬಹಳ ಸಮಯದ ಬಳಿಕ ಬಟ್ಟೆ ಇಡಲು ಪೆಟ್ಟಿಗೆ ತೆರೆದಾಗ ಮಕ್ಕಳು ಅದರಲ್ಲಿ ಪತ್ತೆಯಾಗಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಯಾದವ್ವೇಂದ್ರ ಯಾದವ್ ಹೇಳಿದ್ದಾರೆ.

ಮಕ್ಕಳನ್ನು ತಪಾಸಣೆ ಮಾಡಿದ ವೈದ್ಯರು, ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮಾನಸಿಕ ಅಸ್ವಸ್ಥ ತಾಯಿಯಿಂದ ಘಟನೆ ನಡೆದಿದೆ. ಈ ಸಂಬಂಧ ಕುಟುಂಬದವರು ಪೊಲೀಸರಿಗೆ ದೂರು ನೀಡಿಲ್ಲ. ಖಮಾರಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರೂ, ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ