ಸ್ಪೂರ್ತಿ

ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

6812

ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಮ್ರಾನ್ ಹಸ್ಮಿ ಮಗಳ ಹುಟ್ಟುಹಬ್ಬದ ನಿಮಿತ್ತ ಆಸ್ಪತ್ರೆ ನಿರ್ಮಿಸಲು ಹಣ ನೀಡಲು ನಿರ್ಧರಿಸಿದ್ದರು.

 

ನೂರಾರು ಕೋಟಿ ಆಸ್ತಿ, ಒಬ್ಬಳು ರಾಜಕುಮಾರಿಯಂಥ ಮಗಳು… ಆಕೆಯ ಹುಟ್ಟುಹಬ್ಬವನ್ನು ಕೇರಿಗೆಲ್ಲ ಊಟ ಹಾಕಿಸಿ ಆಚರಿಸುವುದಕ್ಕೂ ಕೊರತೆಯಿಲ್ಲದ ಸಿರಿವಂತಿಕೆ… ಇಷ್ಟೆಲ್ಲ ಇದ್ದರೂ ಈ ದಂಪತಿ ಮಾತ್ರ ತಮ್ಮ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದು ಅನುಕರಣೀಯವಾಗಿ! ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅವರ ಪತ್ನಿ ಅಮೃತಾ ಟಾಟಾ ತಮ್ಮ ಮಗಳ ಹುಟ್ಟು ಹಬ್ಬದ ಸವಿನೆನಪಿಗಾಗಿ ನ್ಯೂ ಇಂಡಿಯಾ ಎಂಬ ಹೆಸರಿನ ಎನ್ ಜಿಒ ವೊಂದನ್ನು ಆರಂಭಿಸಿ, ಆ ಮೂಲಕ 200 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆಯೊಂದನ್ನು ನಿರ್ಮಿಸಲು ಮುಂದಾಗಿದ್ದಾರೆ!

ಟ್ರಸ್ಟ್ ಗಾಗಿ ಈ ದಂಪತಿ 100 ಕೋಟಿ ರು. ಬೆಲೆಯ 50 ಎಕರೆ ಭೂಮಿಯನ್ನು ಟ್ರಸ್ಟ್ ಗೆ ನೀಡಿದ್ದು, 100 ಕೋಟಿ ರು ಹಣವನ್ನು ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ನೀಡಲಾಗುವುದು, ದೇಶಾದ್ಯಂತ ಎಲ್ಲಾ ಕ್ಯಾನ್ಸರ್ ರೋಗಿಗಳು ಬಂದು ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ, ಈ ಆಸ್ಪತ್ರೆಯಲ್ಲಿ 150 ಹಾಸಿಗೆಗಳಿರುತ್ತವೆ. ವಿವಿಧ ಹಂತಗಳಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, ಯುಕೆ ಮೂಲದ ಆರ್ಕಿಟೆಕ್ಟ್ ಮತ್ತು ಎಂಜಿನೀಯರ್ ಗಳು ಈ ಕಟ್ಟಡ ನಿರ್ಮಾಣ ಮಾಡಲಿದ್ದಾರೆ.

ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ:-

ಬಡ ಮತ್ತು ಅಶಕ್ತರಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶ ಈ ಆಸ್ಪತ್ರೆಯದು. ಇದು ಭಾರತದ ಮೊಟ್ಟಮೊದಲ ಕ್ಯಾಶ್ ಲೆಸ್ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಡೆಯಲಿದೆ. ಈ ಆಸ್ಪತ್ರೆಗೆ ಟಾಟಾ ದಂಪತಿಯೇ ಸ್ವ ಇಚ್ಛೆಯಿಂದ ಹಣ ಹಾಕುತ್ತಿದ್ದು, ಬೇರೆ ಯಾರಿಂದಲೂ ದೇಣಿಗೆ ಪಡೆದಿಲ್ಲ. ಕಿಮೋಥೆರಪಿಯ ಒಂದು ಸಿಟ್ಟಿಂಗ್ ಗೆ ಸುಮಾರು 90,000 ರೂ. ವೆಚ್ಚವಾಗುತ್ತದೆ.

ಇದನ್ನು ಭರಿಸುವುದಕ್ಕೆ ಯಾವ ಬಡವರಿಗೆ ಸಾಧ್ಯ? ಅದಕ್ಕೆಂದೇ ಉಚಿತ ಚಿಕಿತ್ಸೆ ನೀಡುವ ಮಹೋನ್ನತ ಕಾರ್ಯಕ್ಕೆ ಈ ದಂಪತಿ ಕೈಹಾಕಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಸುದ್ದಿ

    ಮಂಗಳಸೂತ್ರ ನುಂಗಿದ ಹೋರಿ… ಮಂಗಳ ಸೂತ್ರದ ಬೆಲೆಯೆಷ್ಟು ಗೊತ್ತಾ?

    ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್‌ನಗರ ಜಿಲ್ಲೆಯ ವಾಘಪುರ್‌ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…

  • ಸುದ್ದಿ

    ಬೆಂಗಳೂರಿನಾದ್ಯಂತ ಈ ದಿನದಂದು ಮದ್ಯ ಮಾರಾಟ ಬಂದ್ ಆಗಲಿದೆ ಕಾರಣವೇನು ಗೊತ್ತಾ,.?

    ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ  ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು  ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ‌ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ  ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು  ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…