ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ ತಂದಿಟ್ಟಿದೆ.
ಸ್ವಾತಿ ಸಿಂಗ್ ಅವರು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಗೌರವ್ ಪಾಂಡೆ ಮತ್ತು ಅವರ ಪತ್ನಿ ನೇಹಾ ಅವರೊಂದಿಗೆ ಗೋಮತಿ ನಗರದಲ್ಲಿ ಬಿ ದಿ ಬಿಯರ್ ಎಂಬ ಹೆಸರಿನ ಬಿಯರ್ ಬಾರ್ವೊಂದಕ್ಕೆ ಚಾಲನೆ ನೀಡಿದ್ದರು.
ಈ ವಿಚಾರ ವೈರಲ್ ಆಗುತ್ತಿದ್ದಂತೆ ವಿಪಕ್ಷಗಳು ಮತ್ತು ಸಾರ್ವಜನಿಕರು ನೂತನ ಸರ್ಕಾರದ ವಿರುದ್ಧ ವ್ಯಾಪಕ ಟೀಕಾ ಪ್ರಹಾರ ನಡೆಸಿದ್ದು, ನೂತನ ಬಿಯರ್ ಬಾರ್ಗೆ ಸರಿಯಾದ ಪರವಾನಿಗೆ ಇಲ್ಲ. ಸರ್ಕಾರ ದ್ವಂದ ನಿಲುವುಗಳನ್ನು ತೋರಿ ಅಕ್ರಮಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಸಚಿವೆ ಸ್ವಾತಿ ಮತ್ತು ಇಬ್ಬರು ಅಧಿಕಾರಿಗಳ ಬಳಿ ಸಿಎಂ ಯೋಗಿ ಕೂಡಲೇ ವರದಿ ನೀಡುವಂತೆ ಹೇಳಿದ್ದಾರೆ.
ಸ್ವಾತಿ ಸಿಂಗ್ ಅವರು ಮಾಯಾವತಿ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಿಜೆಪಿ ನಾಯಕ ದಯಾ ಶಂಕರ್ ಸಿಂಗ್ ಅವರ ಪತ್ನಿಯಾಗಿದ್ದು, ಸರೋಜಿನಿ ನಗರ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿ ಸಚಿವೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಇಸ್ಲಾಮಾಬಾದ್, ಇನ್ನುಮುಂದೆ ಕಾಲೇಜು ಕ್ಯಾಂಪಸ್ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್ನಲ್ಲಿ…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…