ಕರ್ನಾಟಕ

ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

519

ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ  ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ  ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಧರಂ ಸಿಂಗ್ 15 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು.

ಧರಮ್ ಸಿಂಗ್’ರವರು  ಭಾರತದ ಕರ್ನಾಟಕ ರಾಜ್ಯದ 17 ನೆ ಮುಖ್ಯಮಂತ್ರಿಗಳು. ಇವರು ಕಾಂಗ್ರೆಸ್ ಪಕ್ಷದ ಸದಸ್ಯರು.

ಗುಲ್ಬರ್ಗ ಜಿಲ್ಲೆಯ, ಜೇವರಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ಡಿಸೆಂಬರ್ 25  ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಹಾಗು ಎಲ್.ಎಲ್.ಬಿ. ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು. ಗುಲ್ಬರ್ಗ ಜಿಲ್ಲೆಯ ಜೇವರಗಿ ವಿಧಾನಸಭಾ ಕ್ಷೇತ್ರದಿಂದ ಸತತ ಎಂಟು ಬಾರಿ ಚುನಾಯಿತರಾಗಿದ್ದಾರೆ. 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.

ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ, ಆದಾಯ ಖಾತೆ ಮೊದಲಾದ ಖಾತೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಮೊಳಕೆ ಬಂದ ಹೆಸರು ಕಾಳಿನ ಲಾಭಗಳೇನು? ಈ ಅರೋಗ್ಯ ಮಾಹಿತಿ ನೋಡಿ.

    ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‍ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಮಧ್ಯಪ್ರದೇಶದಲ್ಲಿ ಬಿಜೆಪಿ ಪಕ್ಷದವರಿಂದ ಕುದುರೆ ವ್ಯಾಪಾರ: ಸಿಎಂ ಕಮಲ್‍ನಾಥ್ ಹೇಳಿಕೆ….!

    ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್‍ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…