ಕರ್ನಾಟಕ

ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

480

ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಧರಂ ಸಿಂಗ್ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ  ಗುರುವಾರವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ  ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಧರಂ ಸಿಂಗ್ 15 ದಿನಗಳ ಕಾಲ ಚಿಕಿತ್ಸೆ ಪಡೆದಿದ್ದರು.

ಧರಮ್ ಸಿಂಗ್’ರವರು  ಭಾರತದ ಕರ್ನಾಟಕ ರಾಜ್ಯದ 17 ನೆ ಮುಖ್ಯಮಂತ್ರಿಗಳು. ಇವರು ಕಾಂಗ್ರೆಸ್ ಪಕ್ಷದ ಸದಸ್ಯರು.

ಗುಲ್ಬರ್ಗ ಜಿಲ್ಲೆಯ, ಜೇವರಗಿ ತಾಲೂಕಿನ, ನೇಲೋಗಿ ಗ್ರಾಮದಲ್ಲಿ 1936 ಡಿಸೆಂಬರ್ 25  ರಲ್ಲಿ ಜನಿಸಿದ ಧರಂ ಸಿಂಗ್, ಹೈದರಾಬಾದ್ ನ ಓಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂ.ಎ. ಹಾಗು ಎಲ್.ಎಲ್.ಬಿ. ಪದವಿಗಳನ್ನು ಪಡೆದಿದ್ದಾರೆ. ವಕೀಲರಾಗಿ ಸ್ವಲ್ಪ ಕಾಲ ಕಾರ್ಯ ನಿರ್ವಹಿಸಿದ ಮೇಲೆ 60ರ ದಶಕದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರಾದರು. ಗುಲ್ಬರ್ಗ ಜಿಲ್ಲೆಯ ಜೇವರಗಿ ವಿಧಾನಸಭಾ ಕ್ಷೇತ್ರದಿಂದ ಸತತ ಎಂಟು ಬಾರಿ ಚುನಾಯಿತರಾಗಿದ್ದಾರೆ. 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

ಜೇವರ್ಗಿ ವಿಧಾನಸಭಾ ಕ್ಷೇತ್ರದಿಂದ ಸತತ 7 ಬಾರಿ ಚುನಾಯಿತರಾಗಿದ್ದ ಇವರು 1980 ರಲ್ಲಿ ಗುಲ್ಬರ್ಗ ಕ್ಷೇತ್ರದಿಂದ ಲೋಕಸಭೆಗೆ ಸಹ ಚುನಾಯಿತರಾಗಿದ್ದರು.

2004ರ ಮೇ 28 ರಿಂದ ಜನವರಿ 2016ರವರೆಗೆ ಧರಂ ಸಿಂಗ್ ಮುಖ್ಯಮಂತ್ರಿಯಾಗಿ ಕರ್ನಾಟಕವನ್ನು ಮುನ್ನಡೆಸಿದ್ದರು. ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು.

ಮುಖ್ಯಮಂತ್ರಿಯಾಗುವ ಮೊದಲು ಕರ್ನಾಟಕ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಲೋಕೋಪಯೊಗಿ ಖಾತೆಯನ್ನು ನಿರ್ವಹಿಸಿದ್ದರು. ಇದಕ್ಕಿಂತ ಮೊದಲು ಗೃಹ ಖಾತೆ, ಸಮಾಜ ಸುಧಾರಣಾ ಖಾತೆ, ಅಬಕಾರಿ ಖಾತೆ, ಆದಾಯ ಖಾತೆ ಮೊದಲಾದ ಖಾತೆಗಳಲ್ಲಿ ಸೇವೆ ಸಲ್ಲಿಸಿದ್ದರು. ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ) ಯ ಅಧ್ಯಕ್ಷತೆಯನ್ನು ಸಹ ವಹಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ