ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.

ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.
ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.