ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.
ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವತಂತ್ರ ಹೋರಾಟಗಾರರು, ಕವಿಗಳು, ಸೈನಿಕರು, ಸಿನಿಮಾ ಕಲಾವಿದರು, ಕ್ರೀಡಾಪಟುಗಳು, ಕುರಿತು ಹಲವು ಚಿತ್ರಗಳು ತೆರೆಮೇಲೆ ಬಂದಿವೆ.
ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ….
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…