ಸುದ್ದಿ

ಮೆದುಳು ಜ್ವರಕ್ಕೆ ಬಲಿಯಾದ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು…..!

47

ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…