ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.