ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…
ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.
*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.
*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.
ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…