ಸರ್ಕಾರದ ಯೋಜನೆಗಳು

ರಾಜಕಾರಣಿಗಳ ಮತ್ತು ಸರಕಾರಿ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗೆ..! ತಿಳಿಯಲು ಈ ಲೇಖನ ಓದಿ ..

338

ಖಾಸಗಿ ಶಾಲೆಗಳು ಇದೀಗ ಎಲ್ಲೆಂದರೆಲ್ಲಿ ತಲೆಯೆತ್ತುತ್ತಿವೆ. ಗಲ್ಲಿಗೊಂದರಂತೆ ಶಾಲೆಗಳು ನಮಗೆ ಕಾಣಸಿಗುತ್ತವೆ. ಶಿಕ್ಷಣವು ಮೂಲಭೂತ ಹಕ್ಕಾಗಿರದೇ, ಇದೀಗ ವ್ಯಾಪಾರದ ಸರಕಾಗಿ ಮಾರ್ಪಟ್ಟಿದೆ. ಇದರೊಂದಿಗೆ ಇನ್ನೊಂದೆಡೆ ಸರಕಾರಿ ಶಾಲೆಗಳು ಮರಣ ಶಯ್ಯೆಯಲ್ಲಿ ಮಲಗಿದಂತೆ ಇಂದೋ ನಾಳೆಯೋ ಬಾಗಿಲು ಮುಚ್ಚುವ ಭೀತಿಯಲ್ಲಿ ಕಾರ್ಯಾಚರಿಸುತ್ತಿದೆ.

ಒಂದೆಡೆ ಸರಕಾರಿ ಶಾಲೆಯಲ್ಲಿನ ಸೌಲಭ್ಯಗಳ ಕೊರತೆ, ಇನ್ನೊಂದೆಡೆ ಖಾಸಗಿ ಶಾಲೆಗಳ ದೌಲತ್ತಿನ ನಡುವೆ ಇದೀಗ ಚಳಿಗಾಳದ ಅಧಿವೇಶನದಲ್ಲಿ ಹೊಸದೊಂದು ಮಸೂದೆಯು ಮಂಡನೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವುಳ್ಳ ಶಿಕ್ಷಣವನ್ನು ಪಡೆಯುತ್ತಿದ್ದರೆ, ಇನ್ನೊಂದೆಡೆ ಬಡಮಕ್ಕಳು ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಅಧಿಕಾರಿಗಳ ಮಕ್ಕಳು ಕಲಿಯುವ ಶಾಲೆಗಳು ಅಭಿವೃದ್ಧಿ ಹೊಂದುತ್ತಿದ್ದು, ಸರಕಾರಿ ಶಾಲೆಗಳು ನನೆಗುದಿಗೆ ಬಿದ್ದಿವೆ. ಇದೀಗ ಸರಕಾರವು ಹೊಸ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದ್ದು, ಸರಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳು(ಜನಪ್ರತಿನಿಧಿಗಳು) ಮಕ್ಕಳು ಕಡ್ಡಾಯವಾಗಿ ಸರಕಾರಿ ಶಾಲೆಗೆ ದಾಖಲಾಗಬೇಕು ಎಂಬುವುದು. ಈ ಕುರಿತಾದಂತೆ ಹಲವು ವರ್ಷಗಳಿಂದಲೇ ಬೇಡಿಕೆಯಿದ್ದು, ಸಿದ್ದರಾಂಯ್ಯ ಸರಕಾರವು ಇದನ್ನು ಜಾರಗೆ ತರುವ ಸಂಭವವಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‍ನ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಈ ವಿಧೇಯಕವನ್ನು ವಿಧಾನ ಪರಿಷತ್‍ನಲ್ಲಿ ಮಂಡಿಸುವ ಸಂಬಂಧ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಒಪ್ಪಿಗೆ ಪಡೆದಿದ್ದಾರೆ. ಬಳಿಕ ವಿಧಾನಸಭೆಯಲ್ಲೂ ಚರ್ಚೆಗೆ ಒಳಪಟ್ಟು ನಂತರ ಶಾಸನವಾಗಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ