Uncategorized, ಸಿನಿಮಾ

ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

228

ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು.

ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ ಹಾಕೋಕೆ ಆಗೋದಿಲ್ಲ. ಫಿಲ್ಮ್ ನೋಡೋರು ನೋಡ್ಬಹುದು. ಇಲ್ಲಾ ಎದ್ದು ಮನೆಗೆ ಹೋಗ್ಬಹುದು ಅಂತ ಧಿಮಾಕು ತೋರಿದ್ದಾರೆ.

ಇದ್ರಿಂದ ಕೋಪಗೊಂಡ ಪ್ರೇಕ್ಷಕರು ಮಾಲ್‍ನಲ್ಲಿ ಗಲಾಟೆ ಮಾಡಿದ್ದಾರೆ. ಅಲ್ಲದೆ, ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ. ಗಲಾಟೆ ಜೋರಾಗುತ್ತಿದ್ದಂತೆ ಚಿತ್ರ ಪ್ರದರ್ಶನ ಸ್ಥಗಿತಗೊಳಿಸಿದ ಮಾಲ್‍ನವರು ಟಿಕೆಟ್ ದುಡ್ಡನ್ನ ವಾಪಸ್ ನೀಡಿದ್ದಾರೆ. ಎಸಿ ಯಲ್ಲಿ ಸಮಸ್ಯೆ ಇದೆ ಅಂತ ಕಾರಣ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ ಭಾರೀ ಸಕ್ಸಸ್‍ಫುಲ್ ಪ್ರದರ್ಶನ ಕಾಣ್ತಿರೋ ರಾಜಕುಮಾರ ಚಿತ್ರವನ್ನ ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಎಸಿ ಚೆನ್ನಾಗಿದ್ದರೂ ಹಾಕದ ಮಾಲ್‍ನವರಿಗೆ ಕನ್ನಡ ಚಿತ್ರ, ಕನ್ನಡಿಗರಿಗಿಂತ ಎಸಿಯೇ ಹೆಚ್ಚಾಗಿ ಹೋಯ್ತಾ ಅಂತ ಪ್ರೇಕ್ಷಕರು ಕಿಡಿಕಾರಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    “ಬರದ ನಾಡಿಗೆ ಭಗೀರಥನ ಪ್ರಯತ್ನ” ಕೆಸಿ ವ್ಯಾಲಿ ಯೋಜನೆಯಿಂದ ಜಿಲ್ಲೆಯನೂರಾರು ಕೆರೆಗಳಿಗೆ ನೀರು…!

    ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸ್ಪೂರ್ತಿ

    19 ವರ್ಷದ ಈ ಯುವತಿ ತನ್ನ ಓದಿಗಾಗಿ ಮಾಡಿದ್ದು ಏನು ಗೊತ್ತಾ..!ಮುಂದೆ ಓದಿ ಶಾಕ್…

    ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.

  • ಗ್ಯಾಜೆಟ್

    ವಾಟ್ಸಾಪ್ ಮೂಲಕ ಅವಿವಾಹಿತರು ತಮ್ಮ ಬಾಳಸಂಗಾತಿ ಆಯ್ಕೆ ಮಾಡಿಕೊಳ್ಳಬಹುದು ..!ತಿಳಿಯಲು ಈ ಲೇಖನ ಓದಿ..

    ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….