corona, Health, karnataka, ಆರೋಗ್ಯ, ಕರ್ನಾಟಕ

ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

13

ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ

 

ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು.

* ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

 

* ದೇವಸ್ಥಾನಕ್ಕೆ 50 ಜನಕ್ಕೆ ಮಾತ್ರ ಅವಕಾಶ

* ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

* ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

* ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ.

* ಯಾವುದೇ ರ‍್ಯಾಲಿ, ಸಭೆ, ಸಮಾರಂಭಗಳು ನಡೆಯುವಂತಿಲ್ಲ.

* ಮೆಟ್ರೋ, ಬಸ್‍ಗಳಿಗೂ ನಿರ್ಬಂಧ ವಿಧಿಸಲಾಗಿದ್ದು, ಸೀಟು ಇರುವಷ್ಟೇ ಪ್ರಯಣಿಕರಿಗೆ ಅವಕಾಶ ನೀಡಲು ಮುಂದಾಗಿದ್ದು, ಬಿಎಂಟಿಸಿ, ಮೆಟ್ರೋಗಳಲ್ಲಿ ನಿಂತು ಪ್ರಯಾಣಿಸುವಂತಿಲ್ಲ.

Loading

About the author / 

Nanda Kumar

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ