ರಾಜಕೀಯ

ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

90

ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಛತ್ತೀಸ್ಗಢದಲ್ಲಿ ಬಿಜೆಪಿ 7, ದೆಹಲಿಯಲ್ಲಿ ಬಿಜೆಪಿ 7 ಹಾಗೂ ಹರಿಯಾಣ, ಒಡಿಶಾದಲ್ಲಿ ಕ್ರಮವಾಗಿ 9 ಹಾಗೂ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರಾಖಂಡದಲ್ಲಿ ಬಿಜೆಪಿ 5, ಜಾರ್ಖಂಡದಲ್ಲಿ ಬಿಜೆಪಿ 12, ಕರ್ನಾಟಕದಲ್ಲಿ ಬಿಜೆಪಿ 23, ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಇನ್ನು ತಮಿಳುನಾಡಿನಲ್ಲಿ ಡಿಎಂಕೆ 35, ಆಂಧ್ರಪ್ರದೇಶದಲ್ಲಿ ವೈಎಸ್ಆರ್ಸಿಪಿ 23, ತೆಲಂಗಾಣದಲ್ಲಿ ಟಿಆರ್ಎಸ್ 11, ಕೇರಳದಲ್ಲಿ ಯುಡಿಎಫ್ 19 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ