ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆ ಏನು ಗೊತ್ತಾ?
ರಾಜ್ಯದಲ್ಲಿರುವ ಸುಮಾರು 6,000 ಶಿಕ್ಷಕರು ತಮ್ಮ ಸೇವೆಯಲ್ಲಿ ಮುಂದುವರಿಯಲು ಡಿಪ್ಲೊಮಾ ಇನ್ ಎಜುಕೇಷನ್ (ಡಿ.ಎಡ್) ಅರ್ಹತೆಯನ್ನು ಪೂರ್ಣಗೊಳಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ಶಿಕ್ಷಕರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ಐಒಎಸ್) ಸಂಸ್ಥೆಯಿಂದ ಮುಕ್ತ ಮತ್ತು ದೂರಶಿಕ್ಷಣದ ಮೂಲಕ 31ನೇ ಮಾರ್ಚ್ 2019ರ ಒಳಗೆ ಈ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಬೇಕು ಎಂದು ಸಚಿವಾಲಯ ನಿರ್ದೇಶನ ನೀಡಿದೆ.
ನಿಗದಿತ ಅವಧಿಯೊಳಗೆ ಅಗತ್ಯ ತರಬೇತಿ ಪಡೆಯಲು ವಿಫಲವಾಗುವ ಯಾವುದೇ ಶಿಕ್ಷಕ, ಶಿಕ್ಷಕಿಯರನ್ನು ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಅಗತ್ಯ ಕನಿಷ್ಠ ವೃತ್ತಿಪರ ವಿದ್ಯಾರ್ಹತೆ ಪಡೆಯಲು ಇದು ಶಿಕ್ಷಕರಿಗೆ ನೀಡುತ್ತಿರುವ ಕೊನೆಯ ಅವಕಾಶವಾಗಿದೆ ಎಂದು ತಿಳಿಸಲಾಗಿದೆ.
ಸೇವೆಯಲ್ಲಿರುವ ಎಲ್ಲ ಶಿಕ್ಷಕರು ಡಿ.ಎಡ್ ವಿದ್ಯಾರ್ಹತೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಗಳು ಶಾಲೆಗಳಿಗೆ ಅಂತಿಮ ಗಡುವಿನ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಶಿಕ್ಷಕರು ಈ ವಿದ್ಯಾರ್ಹತೆ ಹೊಂದುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿತಾ ಕಾರ್ವಾಲ್ ತಿಳಿಸಿದ್ಧಾರೆ.
ನಾವು ಈ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ರಾಜ್ಯಾದ್ಯಂತ ಇರುವ ಎಲ್ಲ ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ಧಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…