ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..
ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು.. ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..
ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..
ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..
ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..
ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….
ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…