ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಾಲಿವುಡ್ ನಟ ರಿತೇಶ್ ದೇಶ್ಮುಖ್ರಿಗೆ ಅವರ ಪತ್ನಿ ಜೆನಿಲಿಯಾ ಡಿಸೋಜಾ ಲಗ್ಷುರಿ ಕಾರೊಂದನ್ನು ಗಿಫ್ಟ್ ನೀಡಿದ್ದಾರೆ. ಅಂದ ಹಾಗೇ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ಯುವಿ ದುಬಾರಿ ಕಾರನ್ನು ಅವರು ನೀಡಿದ್ದಾರೆ.

ಇತ್ತೀಚೆಗಷ್ಟೆ ರಿತೇಶ್ 40ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬರ್ತಡೇ ಗಿಫ್ಟ್ ಆಗಿ ಪತ್ನಿ ಜೆನಿಲಿಯಾ ಈ ಐಷಾರಾಮಿ ಕಾರನ್ನು ನೀಡಿದ್ದಾರೆ. ಭಾರತದಲ್ಲಿ ಈ ಕಾರನ್ನು ಹೊಂದಿರುವ ಎರಡನೇ ವ್ಯಕ್ತಿ ರಿತೇಶ್ ದೇಶ್ಮುಖ್.

ಈ ಕಾರಿನ ಸ್ಪೆಷಾಲಿಟಿ ಅಂದ್ರೆ ಹಿಂದಿನ ಬಾಗಿಲುಗಳು ಮೇಲ್ಮುಖವಾಗಿ ತೆರೆದುಕೊಳ್ಳುತ್ತವೆ. 7 ಜನರು ಇದರಲ್ಲಿ ಆರಾಮಾಗಿ ಪ್ರಯಾಣಿಸಬಹುದು. ಒಮ್ಮೆ ಪೂರ್ತಿಯಾಗಿ ಚಾರ್ಜ್ ಮಾಡಿದ್ರೆ ಈ ಕಾರು 470 ಕಿಮೀ ಓಡಬಲ್ಲದು. ಇದರ ಬೆಲೆ ಸರಿಸುಮಾರು 55 ಲಕ್ಷ ರೂಪಾಯಿ.

ತಮ್ಮ ಪತ್ನಿ ಉಡುಗೊರೆಯಾಗಿ ನೀಡಿರುವ ಕೆಂಪು ಬಣ್ಣದ ಈ ಕಾರೊಂದಿಗೆ ನಿಂತಿರುವ ಫೋಟೊವನ್ನು ಟ್ವಿಟ್ ಮಾಡಿರುವ ರಿತೇಶ್ ದೇಶ್ಮುಖ್ ನನ್ನ ಪತ್ನಿಗೆ 40 ವರ್ಷದವರಿಗೆ 20 ರ ಹರೆಯದವರಂತೆ ಫೀಲ್ ಬರಿಸುವ ಕಲೆ ಗೊತ್ತಿದೆ ಎಂದು ಬರೆದುಕೊಂಡಿದ್ದಾರೆ. ಅತ್ಯಾಧುನಿಕ ಸೌಕರ್ಯಗಳುಳ್ಳ ಈ ಕಾರಿನ ಬೆಲೆ ಅಮೆರಿಕದಲ್ಲಿ 55 ಲಕ್ಷ ರೂ. ಆರಂಭವಾಗುತ್ತದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…
ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.