ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

54

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…

  • ಜ್ಯೋತಿಷ್ಯ

    ಚಾಮುಂಡೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…