News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

1425

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.

ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.

ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.

ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-

  • ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು. ಉದಾಹರಣೆಗೆ: ಸೀರೆ, ಹಣ್ಣು, ಅಲಂಕಾರಿಕ ವಸ್ತು, ಶುದ್ಧ ನೀರು ಇತ್ಯಾದಿ…
  • ಲಕ್ಷ್ಮಿಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು. ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು. ದೀಪವನ್ನು ತುಪ್ಪದಿಂದ ಹಚ್ಚಬೇಕು.
  • ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು, ಶುದ್ಧ ನೀರಿನಿಂದ ಸ್ನಾನ ಮಾಡಬೇಕು. ಲಕ್ಷ್ಮಿ ವ್ರತ ಮಾಡುವವರೇ ಕಲಶ ಸ್ಥಾಪನೆ ಮಾಡಬೇಕು.
  • ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
  • ಕಲಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು. ನಂತರ ಒಂಬತ್ತು ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ, ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು. ಇದನ್ನು ಕಲಶದ ಚೊಂಬಿಗೆ ಕಟ್ಟಿದರೆ ಕಲಶ ತಯಾರಾಗುತ್ತದೆ.

  • ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಿಬೇಕು. ಅರಿಶಿಣ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು. ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು. ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಇದರ ಮೇಲೆ ಕಲಶವನ್ನು ಇಡಬೇಕು. ಅರಿಶಿಣವನ್ನು ಸ್ವಲ್ಪ ನೀರಿನಿಂದ ಮಿಶ್ರಣ ಮಾಡಿ ಒಂದು ನಾಣ್ಯ ತೆಗೆದುಕೊಂಡು ಅದರ ಹಿಂದೆ ಹಾಕಬೇಕು. ನಂತರ ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳಬೇಕು. ನಂತರ ದೇವಿಯನ್ನು ಆವಾಹನೆ ಮಾಡಬೇಕು ಅಂದರೆ ಪ್ರಾಣ ಪ್ರತಿಷ್ಠಾಪನೆ.

  • ಇಷ್ಟಾದ ನಂತರ ಲಕ್ಷ್ಮಿ ದೇವಿಗೆ ಪ್ರಾಣಪ್ರತಿಷ್ಠಾಪನೆ ಮಾಡಬೇಕು. ಇದಕ್ಕೆ ಷೋಡಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ. ದೇವಯು ತನ್ನ ಎಲ್ಲ ಆಂಗಾಂಗ, ಪರಿವಾರ, ಆಯುಧ ಮತ್ತು ಶಕ್ತಿಸಹತಿವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಟಿತಳಾಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವತೆಯಲ್ಲಿ ಸಂಪೂರ್ಣ ಶರಣಾಗತಭಾವದಿಂದ ಮಾಡುವ ಪ್ರಾರ್ಥನೆಯೆ ಪ್ರಾಣಪ್ರತಿಪ್ಠಾಪನೆ ಎಂದು ಕರೆಯಲಾಗುತ್ತದೆ.
  • ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು. ದೇವಿಯ ಸಹಸ್ರ ನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.
  • ಪ್ರಾಣ ಪ್ರತಿಷ್ಟಾಪನೆ ಬಳಿಕ ನಂತರ ಲಕ್ಷ್ಮಿ ದೇವಿಗೆ ಸೀರೆಯನ್ನು ಉಡಿಸಿ, ಅಲಂಕಾರ ಮಾಡಬೇಕು.

ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.

ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.

ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.

 

ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.

ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.

ದೇವಿಯ ವಿಸರ್ಜನೆ…

ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.

ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.

ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.

ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.

ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.

ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.

ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸಿನಿಮಾ

    ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

    ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.