ಆಧ್ಯಾತ್ಮ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

1414

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.

ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.

ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.

ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-

  • ಲಕ್ಷ್ಮಿ ಪೂಜೆ ಮಾಡುವ ಹಿಂದಿನ ದಿನವೇ ಶುಭ್ರವಾಗಿ ಪೂಜೆಗೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನು ತಯಾರು ಮಾಡಿಟ್ಟುಕೊಳ್ಳಬೇಕು. ಉದಾಹರಣೆಗೆ: ಸೀರೆ, ಹಣ್ಣು, ಅಲಂಕಾರಿಕ ವಸ್ತು, ಶುದ್ಧ ನೀರು ಇತ್ಯಾದಿ…
  • ಲಕ್ಷ್ಮಿಯನ್ನು ಉತ್ತರಾಭಿಮುಖವಾಗಿ ಪ್ರತಿಷ್ಠಾಪಿಸುವುದಾದರೆ ಹಸಿರು ಬಣ್ಣದ ಸೀರೆಯನ್ನು ತೊಡಿಸಬೇಕು. ಕೆಂಪು ಮತ್ತು ಹಳದಿ ಹೂವುಗಳನ್ನು ಬಳಸಬೇಕು. ದೀಪವನ್ನು ತುಪ್ಪದಿಂದ ಹಚ್ಚಬೇಕು.
  • ಪೂಜೆಯ ದಿನದಂದು ಮಹಿಳೆಯರು ಸೂರ್ಯ ಹುಟ್ಟುವುದಕ್ಕೆ ಮುಂಚೆಯೇ ಎದ್ದು, ಶುದ್ಧ ನೀರಿನಿಂದ ಸ್ನಾನ ಮಾಡಬೇಕು. ಲಕ್ಷ್ಮಿ ವ್ರತ ಮಾಡುವವರೇ ಕಲಶ ಸ್ಥಾಪನೆ ಮಾಡಬೇಕು.
  • ಪೂಜಾ ಸ್ಥಳವನ್ನು ತುಂಬಿದ ಕೊಡದ ನೀರಿನಿಂದ ಶುದ್ಧ ಮಾಡಿ. ಸ್ಥಳದಲ್ಲಿ ಅಷ್ಟದಳದ ರಂಗೋಲಿ ಹಾಕಿ, ಬಾಳೆಕಂಬ, ಮಾವಿನ ಎಲೆಗಳಿಂದ ಸಿಂಗರಿಸಬೇಕು.
  • ಕಲಶಕ್ಕೆ ತುಂಬಿದ ಕೊಡದ ಶುದ್ಧ ನೀರು ಹಾಕಿ/ಶುದ್ಧ ಅಕ್ಕಿ ಹಾಕಬೇಕು. ಇದರ ಜೊತೆಗೆ ಅರಿಶಿಣದ ಕೊಂಬು, ಅಡಿಕೆ, ಬೆಳ್ಳಿ ಅಥವಾ ಯಾವುದೇ ನಾಣ್ಯ, ದ್ರಾಕ್ಷಿ, ಗೋಡಂಬಿ, ಕರ್ಜೂರ, ಬಾದಾಮಿ, ಕಲ್ಲುಸಕ್ಕರೆ ಹಾಕಬೇಕು. ನಂತರ ಒಂಬತ್ತು ಎಳೆಯ ದಾರ ತೆಗೆದುಕೊಂಡು ಇದಕ್ಕೆ ಅರಿಶಿಣ ಹಚ್ಚಿ, ಅರಿಶಿಣದ ಕೊಂಬನ್ನು ಕಟ್ಟಿ ತಾಳಿ ಮಾಡಬೇಕು. ಇದನ್ನು ಕಲಶದ ಚೊಂಬಿಗೆ ಕಟ್ಟಿದರೆ ಕಲಶ ತಯಾರಾಗುತ್ತದೆ.

  • ನಂತರ ಶುಭ್ರವಾಗಿ ತೊಳೆದ ತೆಂಗಿನಕಾಯಿಗೆ ಅರಿಶಿಣ ಹಚ್ಚಿಬೇಕು. ಅರಿಶಿಣ ಹಚ್ಚಿದ ತೆಂಗಿನಕಾಯಿಗೆ ಕುಂಕುಮ ಬೊಟ್ಟು ಇಡಬೇಕು. ಕಳಶದ ಬಾಯಿಗೆ ವೀಳ್ಯದೆಲೆ ಅಥವಾ ಮಾವಿನ ಎಲೆ ಇಡಬೇಕು. ನಂತರ ತಟ್ಟೆಯೊಂದಕ್ಕೆ ಅಕ್ಕಿ ಹಾಕಿ ಇದರ ಮೇಲೆ ಕಲಶವನ್ನು ಇಡಬೇಕು. ಅರಿಶಿಣವನ್ನು ಸ್ವಲ್ಪ ನೀರಿನಿಂದ ಮಿಶ್ರಣ ಮಾಡಿ ಒಂದು ನಾಣ್ಯ ತೆಗೆದುಕೊಂಡು ಅದರ ಹಿಂದೆ ಹಾಕಬೇಕು. ನಂತರ ದೇವರ ಬಳಿ ಇಚ್ಛೆಯನ್ನು ಹೇಳಿಕೊಂಡು ದೇವಿಯನ್ನು ಬೇಡಿ ಸಂಕಲ್ಪ ಮಾಡಿಕೊಳ್ಳಬೇಕು. ನಂತರ ದೇವಿಯನ್ನು ಆವಾಹನೆ ಮಾಡಬೇಕು ಅಂದರೆ ಪ್ರಾಣ ಪ್ರತಿಷ್ಠಾಪನೆ.

  • ಇಷ್ಟಾದ ನಂತರ ಲಕ್ಷ್ಮಿ ದೇವಿಗೆ ಪ್ರಾಣಪ್ರತಿಷ್ಠಾಪನೆ ಮಾಡಬೇಕು. ಇದಕ್ಕೆ ಷೋಡಶೋಪಚಾರ ಪೂಜೆಯೆಂದು ಕರೆಯಲಾಗುತ್ತದೆ. ದೇವಯು ತನ್ನ ಎಲ್ಲ ಆಂಗಾಂಗ, ಪರಿವಾರ, ಆಯುಧ ಮತ್ತು ಶಕ್ತಿಸಹತಿವಾಗಿ ಬಂದು ಮೂರ್ತಿಯಲ್ಲಿ ಪ್ರತಿಷ್ಟಿತಳಾಬೇಕು ಮತ್ತು ನಮ್ಮ ಪೂಜೆಯನ್ನು ಸ್ವೀಕರಿಸಬೇಕು ಎಂದು ದೇವತೆಯಲ್ಲಿ ಸಂಪೂರ್ಣ ಶರಣಾಗತಭಾವದಿಂದ ಮಾಡುವ ಪ್ರಾರ್ಥನೆಯೆ ಪ್ರಾಣಪ್ರತಿಪ್ಠಾಪನೆ ಎಂದು ಕರೆಯಲಾಗುತ್ತದೆ.
  • ಪ್ರಾಣಪ್ರತಿಷ್ಠಾಪನೆ ಸಮಯದಲ್ಲಿ ಕೈಯಲ್ಲಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವುಗಳನ್ನು ತೆಗೆದುಕೊಳ್ಳಬೇಕು. ದೇವಿಯ ಸಹಸ್ರ ನಾಮವನ್ನು ಹೇಳಿ ಕೊನೆಗೆ ನಮಃ ಎಂದು ಹೇಳಿ ಗಂಧಾಕ್ಷತೆ, ತುಳಸೀದಳ ಅಥವಾ ಹೂವನ್ನು ದೇವತೆಗೆ ಅರ್ಪಿಸಿ ನಮಸ್ಕರಿಸಬೇಕು.
  • ಪ್ರಾಣ ಪ್ರತಿಷ್ಟಾಪನೆ ಬಳಿಕ ನಂತರ ಲಕ್ಷ್ಮಿ ದೇವಿಗೆ ಸೀರೆಯನ್ನು ಉಡಿಸಿ, ಅಲಂಕಾರ ಮಾಡಬೇಕು.

ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.

ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.

ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.

 

ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.

ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.

ದೇವಿಯ ವಿಸರ್ಜನೆ…

ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.

ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.

ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.

ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.

ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.

ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.

ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…

ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|

ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||

ಮೂಲ:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…