ಸುದ್ದಿ

ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

53

ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ ಮುಳುಗಡೆಯಾಗಿದೆ.. ಕುದುರೆಮುಖ,

ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕಿಸುವ ಹೆಬ್ಬಾಳ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಕೆಲವೆಡೆ ಘಟ್ಟ ಪ್ರದೇಶಗಳಲ್ಲಿ ರಸ್ತೆಗಳೂ ಕೊಚ್ಚಿಹೋಗಿವೆಕೇವಲ ಚಿಕ್ಕಮಗಳೂರಷ್ಟೇ ಅಲ್ಲ, ಕೊಡಗು ಜಿಲ್ಲೆಯಲ್ಲೂ ಕಳೆದ ಮೂರು ದಿನಗಳಿಂದ ಮುಂಗಾರು ಬಿರುಸುಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸಂಭಾವ್ಯ ಅಪಾಯ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಇದರ ಜೊತೆ ಎನ್‌ಡಿಆರ್‌ಎಫ್‌ ತಂಡ ಕೂಡ ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.

ಇನ್ನು ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಅದರ ಎಫೆಕ್ಟ್‌ ರಾಜ್ಯದ ಗಡಿ ಗ್ರಾಮಗಳಿಗೂ ತಟ್ಟಿದೆ. ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧ್‌ಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ 6 ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸವಾರರು ಪರದಾಡುವಂತಾಗಿದೆ.

ರಾಣೆಬೆನ್ನೂರು ತಾಲೂಕಿನ ಹೊಳೆಆನ್ವೇರಿ ಗ್ರಾಮದ ಬಳಿ ನಡುಗಡ್ಡೆಯಲ್ಲಿ 7 ಕುದುರೆಗಳು ಸಿಲುಕಿವೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ನಡುಗಡ್ಡೆಯಲ್ಲಿ ಸಿಲುಕಿಗೆ ಮೂಖ ಪ್ರಾಣಿಗಳು ಪರದಾಡುತ್ತಿದೆ. ಕಳೆದ 3 ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ಕಂಗಾಲಾಗಿದ್ದು, ಮೂಖ ಪ್ರಾಣಿಗಳನ್ನು ರಕ್ಷಿಸುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…