ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

165

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ