ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ.
ಇಂಗಾಲದ ಡೈಆಕ್ಸೈಡ್ ಹೊರಹೊಮ್ಮುವುದನ್ನು ತಡೆಯುವ ನಿಟ್ಟಿನಲ್ಲಿ ಎಮಿರೇಟ್ಸ್ ಗ್ರೂಪ್ ಅಭಿಯಾನವನ್ನು ಕೈಗೊಂಡಿತ್ತು. ಅದರಲ್ಲಿ ಬರೋಬ್ಬರಿ 73,393 ಮೆಟ್ರಿಕ್ ಟನ್ ತ್ಯಾಜ್ಯವನ್ನು ಸಂಗ್ರಹಿಸಲಾಗಿದೆ. ಈ ಅಭಿಯಾನದಲ್ಲಿ ಕಾರ್ಪೋರೇಷನ್ಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ವ್ಯಕ್ತಿಗಳು ಅಥವಾ ಕುಟುಂಬದವರು ಎಂದು ಭಾಗ ಮಾಡಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತಿತ್ತು.
ಈ ಅಭಿಯಾನದಲ್ಲಿ ಕಾಗದದ ಹೊರತಾಗಿಯೂ ಪ್ಲಾಸ್ಟಿಕ್, ಗಾಜು, ಡಬ್ಬಿಗಳು ಮತ್ತು ಮೊಬೈಲ್ ಫೋನ್ಗಳು ಸಂಗ್ರಹಿಸಲಾಗಿದೆ. ಅನೇಕ ಜನರು ಈ ಅಭಿಯಾನದಲ್ಲಿ ಭಾಗವಹಿಸಿ ತ್ಯಾಜ್ಯ ಪೇಪರ್ಗಳನ್ನು ಸಂಗ್ರಹಿಸಿದ್ದರು. ಆದರೆ 8 ವರ್ಷದ ಟೋನಿ 14,914 ಕೆಜಿ ತ್ಯಾಜ್ಯ ಸಂಗ್ರಹಿಸಿ ಎಲ್ಲರಿಗೂ ಅಚ್ಚರಿ ನೀಡಿದ್ದಳು. ಪ್ರತಿವಾರ ಕಾಗದಗಳನ್ನು ಸಂಗ್ರಹಿಸಲು ನಾನು ನಮ್ಮ ಪ್ರದೇಶದ ಸುತ್ತಮುತ್ತ ಅಭಿಯಾನ ನಡೆಸುತ್ತಿದ್ದೆ. ಪ್ರತಿಯೊಬ್ಬರ ಮನೆಗೆ ಹೋಗಿ ಕಾಗದ ತ್ಯಾಜ್ಯ, ಓದಿ ಮುಗಿದ ಪತ್ರಿಕೆ, ನಿಯತಕಾಲಿಕೆ ಇತ್ಯಾದಿಗಳನ್ನು ಸಂಗ್ರಹಿಸಿ ತರುತ್ತಿದ್ದೆ ಎಂದು ಟೋನಿ ಹೇಳಿದ್ದಾಳೆ.
ಯಾರೂ ಕೂಡ ಬಳಸಿದ ಪೇಪರ್ಗಳನ್ನು ಮನೆಯಲ್ಲಿ ಇಟ್ಟುಕೊಳ್ಳಲು ಇಟ್ಟಪಡುವುದಿಲ್ಲ. ಅದರಲ್ಲೂ ಮರುಬಳಕೆ ಮಾಡುವಂತಹ ತ್ಯಾಜ್ಯವನ್ನು ಸಂಗ್ರಹಿಸಬೇಕು. ನನ್ನಂತೆಯೇ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಬೇಕು. ಆಗ ಮುಂದಿನ ದಿನದಲ್ಲಿ ನಾವು ಪರಿಸರ ಮಧ್ಯೆ ವಾಸಿಸಬಹುದು ಎಂದು ತಿಳಿಸಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…