ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು.

ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಕಾರಣ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾರ್ ಪಾರ್ಕಿಂಗ್ ಗೇಟ್‌ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದ್ದು, ಕಾರ್ ಮಾಲಿಕರು ತಮ್ಮ ತಮ್ಮ ಕಾರ್ ಬಳಿ ಓಡಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರನ್ನು ಕಾರ್ ಬಳಿ ಬಿಟುತ್ತಿಲ್ಲವಾದ್ದರಿಂದ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ವಾಗ್ವಾದವೂ ಏರ್ಪಟ್ಟಿದೆ..

ಮೊದಲನೇ ಹಂತದ ವಿಮಾನ ಹಾರಾಟ ಮುಕ್ತಾಯಗೊಂಡಿದ್ದು, ಇಂದು ಮತ್ತು ನಾಳೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಹುಲ್ಲಿಗೆ ಕೆಲ ಕಿಡಿಗೇಡಿಗಳು ಸಿಗರೇಟ್ ಹಾಕಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಯಲಹಂಕದ ಮೈದಾನದಲ್ಲಿ ದಟ್ಟಹೊಗೆ ಕಾಣಿಸಿಕೊಂಡಿದ್ದು, ಈಗಾಗಲೇ ಅಗ್ನಿಶಾಮಕದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…