inspirational

ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

71

ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ

ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದೇ ವೇಳೆ, ಕುಟುಂಬದವರೊಂದಿಗೆ ಟ್ರಿಪ್ ಹೋಗಿದ್ದ ಮಾಲೀಕಯ್ಯ ಗುತ್ತೇದಾರ್ ಮತ್ತು ಆರ್​.ವಿ. ದೇಶಪಾಂಡೆ ಕೂಡ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅನರ್ಹ ಶಾಸಕರ ಜೊತೆ ಬಿಜೆಪಿ ನಾಯಕರಾದ ಆರ್​. ಅಶೋಕ್ ಮತ್ತು ಅಶ್ವತ್ಥನಾರಾಯಣ ಕೂಡ ಬಂದಿಳಿದಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಎಂಟಿಬಿ ನಾಗರಾಜ್, ನಾನು ಮುಂಬೈನಿಂದ ಒಬ್ಬನೇ ಬಂದೆ. ನ್ಯಾಯಾಂಗದ ಮೇಲೆ ನನಗೆ ನಂಬಿಕೆಯಿದೆ, ಹೋರಾಡ್ತೀನಿ. ಬಿಜೆಪಿಯ ಯಾವ ಶಾಸಕರೂ ನನ್ನನ್ನು ಸಂಪರ್ಕಿಸಿಲ್ಲ. ಸ್ಪೀಕರ್ ನೀಡಿರುವ ಆದೇಶದ ವಿರುದ್ಧ ಕಾನೂನಿನ ಮೂಲಕ ಹೋರಾಟ ಮಾಡುತ್ತೇವೆ. ಉಳಿದ ಶಾಸಕರು ಮುಂಬೈನಲ್ಲೇ ಇದ್ದಾರೆ. ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅತೃಪ್ತರಿಗೆ ಬಿಗ್ ಶಾಕ್; ಕಾಂಗ್ರೆಸ್​ನ 11, ಜೆಡಿಎಸ್​ನ 3 ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್

ಕಳೆದ ವಾರ ಕಾಂಗ್ರೆಸ್​ನ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ,  ಅಥಣಿಯ ಮಹೇಶ್ ಕುಮಟಹಳ್ಳಿ, ರಾಣೇಬೆನ್ನೂರು ಶಾಸಕ ಆರ್. ಶಂಕರ್ ಅವರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ನಿನ್ನೆ ಮಸ್ಕಿ ಶಾಸಕ ಪ್ರತಾಪ ಗೌಡ ಪಾಟೀಲ್, – ಯಶವಂತಪುರದ ಎಸ್.ಟಿ. ಸೋಮಶೇಖರ್, ಕೆ.ಆರ್​.ಪುರದ ಭೈರತಿ ಬಸವರಾಜು, ಯಲ್ಲಾಪುರದ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್, ಆರ್​.ಆರ್​. ನಗರ ಶಾಸಕ ಮುನಿರತ್ನ, ಶಿವಾಜಿನಗರ ಶಾಸಕ ರೋಷನ್ ಬೇಗ್, ಚಿಕ್ಕಬಳ್ಳಾಪುರದ ಡಾ. ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಮಹಾಲಕ್ಷ್ಮೀ ಲೇಔಟ್​ನ ಕೆ. ಗೋಪಾಲಯ್ಯ, ಕೆ.ಆರ್​. ಪೇಟೆಯ ನಾರಾಯಣಗೌಡ, ವಿಜಯನಗರದ ಆನಂದ್ ಸಿಂಗ್, ಹುಣಸೂರಿನ ಹೆಚ್. ವಿಶ್ವನಾಥ್, ಕಾಗೇವಾಡ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಅನರ್ಹಗೊಳಿಸಿದ್ದಾರೆ. ಅಲ್ಲಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮೈತ್ರಿ ಪಕ್ಷದ ಎಲ್ಲ ಶಾಸಕರನ್ನೂ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸುವ ಮೂಲಕ ಶಾಕ್ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಆರೋಗ್ಯ

    ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವಾ ಎಷ್ಟು ಹಾನಿಕರ ಗೊತ್ತಾ ನಿಮ್ಗೆ..?

    ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.

  • ಆಧ್ಯಾತ್ಮ

    ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

    ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…

  • ಆರೋಗ್ಯ

    ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

    ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…