ಉಪಯುಕ್ತ ಮಾಹಿತಿ

ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

1317

ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

ನಿಮಗೆ ಗೊತ್ತಾ ಶಾಸ್ತ್ರದ ಪ್ರಕಾರ ಗಣೇಶನನ್ನು ಮಣ್ಣಿನಲ್ಲೇ ತಯಾರಿಸಬೇಕಂತೆ… 

ಹೌದು, ಶ್ರೀ ಗಣೇಶನನ್ನು ಶಾಸ್ತ್ರದ ಪ್ರಕಾರ ಜೇಡಿಮಣ್ಣು ಅಥವಾ ಆವೆಮಣ್ಣಿನಿಂದ ತಯಾರಿಸಬೇಕು. ಪುರಾಣದ ಪ್ರಕಾರ ಪಾರ್ವತಿಯು    ದೇವಿಯು ಮೃತ್ತಿಕೆಯ (ಮಣ್ಣಿನ) ಆಕಾರ ಮಾಡಿ ಅದರಲ್ಲಿ ಶ್ರೀ ಗಣೇಶನ ಆವಾಹನೆಯನ್ನು ಮಾಡಿದಳು. ‘ಭಾದ್ರಪದ ಶುಕ್ಲ ಚತುರ್ಥಿಯಂದು ಮಣ್ಣಿನ ಗಣೇಶಮೂರ್ತಿಯನ್ನು ತಯಾರಿಸಬೇಕು’, ಎಂಬ ಶಾಸ್ತ್ರವಿಧಿಯಿದೆ.

ಆದ್ರೆ ಇತ್ತೀಚೆಗೆ ಮಾತ್ರ ಬಣ್ಣ ಬಣ್ಣ ಗಣೇಶನ ಮೂರ್ತಿಗಳನ್ನು ತಯಾರಿಸುವುದು ಹೆಚ್ಚು. ಇವುಗಳನ್ನು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ    ತಾಯರಿಸಲಾಗಿರುತ್ತದೆ. ಕಾರಣ ಗಣೇಶ ಮೂರ್ತಿಗಳು ಆಕರ್ಷಕವಾಗಿ ಕಾಣಲೆಂದು…

ಹಾಗಾದ್ರೆ ಮಣ್ಣಿನ ಮೂರ್ತಿಗೂ ಮತ್ತು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಗೂ ಇರುವ ವ್ಯತ್ಯಾಸವೇನು ಗೊತ್ತಾ..?

ಮಣ್ಣಿನ ಮೂರ್ತಿಯಲ್ಲಿ ಶ್ರೀ ಗಣೇಶನ ಪವಿತ್ರಕಗಳು ಹೆಚ್ಚಿನ ಪ್ರಮಾಣದಲ್ಲಿ ಆಕರ್ಷಿಸಿ ಕಾರ್ಯನಿರತವಾಗಿರುತ್ತವೆ :-

‘ಮಣ್ಣಿನಲ್ಲಿರುವ ಪೃಥ್ವಿತತ್ತ್ವದಿಂದಾಗಿ ಮೂರ್ತಿಯು ಬ್ರಹ್ಮಾಂಡ ಮಂಡಲದಿಂದ ಆಕರ್ಷಿಸಿದ ದೇವತೆಯ ತತ್ತ್ವವು ಮೂರ್ತಿಯಲ್ಲಿ ದೀರ್ಘಕಾಲ ಕಾರ್ಯನಿರತವಾಗಿರುತ್ತದೆ.

ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ವಾಯುಮಂಡಲವು ಶುದ್ಧವಾಗುತ್ತದೆ:-

‘ಮಣ್ಣಿನ ಮೂರ್ತಿಯನ್ನು ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಅದು ಕೂಡಲೇ ನೀರಿನಲ್ಲಿ ಕರಗಿ, ಹರಿಯುವ ನೀರಿನಿಂದ ಸುತ್ತ ಮುತ್ತಲಿನ ಪರಿಸರದಲ್ಲಿ ದೂರದವರೆಗೆ ದೇವತೆಗಳ ಸಾತ್ತ್ವಿಕ ಲಹರಿಗಳನ್ನು ಕಡಿಮೆ ಕಾಲಾವಧಿಯಲ್ಲಿ ಪ್ರಕ್ಷೇಪಿಸುತ್ತದೆ. ಇದರಿಂದ ಸಂಪೂರ್ಣ ಪರಿಸರದ ವಾಯುಮಂಡಲ ಶುದ್ಧವಾಗುತ್ತದೆ. ಈ ಪ್ರಕ್ರಿಯೆಯಿಂದ ಸಮಷ್ಟಿ ಸ್ತರದಲ್ಲಿ ಲಾಭವಾಗಲು ಸಹಾಯವಾಗುತ್ತದೆ

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿ :-

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಲ್ಲಿ ದೇವತೆಯ ತತ್ತ್ವವನ್ನು ಆಕರ್ಷಿಸುವ ಮತ್ತು ಕಾರ್ಯನಿರತವಾಗಿಡುವ ಕ್ಷಮತೆಯು ಕಡಿಮೆಯಿರುತ್ತದೆ. ಆದ್ದರಿಂದ ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಆಧ್ಯಾತ್ಮಿಕ ಸ್ತರದಲ್ಲಿ ಹೆಚ್ಚೇನೂ ಲಾಭವಾಗುವುದಿಲ್ಲ.’

 ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದಾಗುವ ಹಾನಿ

ಪ್ಲಾಸ್ಟರ್ ಆಫ್ ಪ್ಯಾರಿಸ್’ ನೀರಿನಲ್ಲಿ ಸಹಜವಾಗಿ ಕರಗದಿರುವುದರಿಂದ ವಿಸರ್ಜನೆಯ ನಂತರ ಮೂರ್ತಿಯು ನೀರಿನ ಮೇಲೆ ತೇಲುತ್ತದೆ. ಅನೇಕ ಕಡೆಗಳಲ್ಲಿ ವಿಸರ್ಜಿತವಾಗದ ಮೂರ್ತಿಗಳ ಅವಶೇಷಗಳನ್ನು ಕೆಲವೊಮ್ಮೆ ಒಟ್ಟು ಮಾಡಿ ಅವುಗಳ ಮೇಲೆ ‘ಬುಲ್ಡೋಝರ್’ನ್ನು ಚಲಾಯಿಸಲಾಗುತ್ತದೆ.

ಹೀಗೆ ಮಾಡುವುದು ಶ್ರೀ ಗಣಪತಿಯ ಘೋರ ವಿಡಂಬನೆಯೇ ಆಗಿದೆ. ಯಾವ ಭಕ್ತಿ ಶ್ರದ್ದೆಗಳಿಂದ  ನಾವು ಶ್ರೀ ಗಣಪತಿಯನ್ನು ಆವಾಹನೆ ಮಾಡುತ್ತೇವೆಯೋ, ಅದೇ ಭಕ್ತಿ ಶ್ರದ್ದೆಗಳಿಂದ  ಅವನನ್ನು ಬೀಳ್ಕೊಡುವುದೂ ಆವಶ್ಯಕವಾಗಿದೆ.

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ವಾತಾವರಣದ ಮೇಲೆ ಬೀರುವ ಪರಿಣಾಮಗಳು:-

‘ಪ್ಲಾಸ್ಟರ್ ಆಫ್ ಪ್ಯಾರಿಸ್’ನಿಂದ ಕೆರೆ, ನದಿ, ಸಮುದ್ರ ಮುಂತಾದವುಗಳ ನೀರು ಕಲುಷಿತಗೊಳ್ಳುತ್ತದೆ. ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಬೇರೆ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರದ ವಿರುದ್ಧವಾಗಿದೆ!

ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್’ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶಮೂರ್ತಿಯನ್ನು ತಯಾರಿಸುತ್ತಾರೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಯ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿಸುವುದಿಲ್ಲ.

‘ಇಕೋ ಫ್ರೆಂಡ್ಲಿ’ ಗಣೇಶಮೂರ್ತಿಗಳ ಬಗೆಗಿನ ವಂಚನೆಯಿಂದ ಎಚ್ಚರ :-

ಇತ್ತೀಚೆಗೆ ಕೆಲವು ಸಂಸ್ಥೆಗಳು ‘ಇಕೋ-ಫ್ರೆಂಡ್ಲಿ (‘ಇಕಾಲಾಜಿಕಲ್ ಫ್ರೆಂಡ್ಲಿ’, ಅಂದರೆ ಪರಿಸರ ಸ್ನೇಹಿ) ಶ್ರೀ ಗಣೇಶಮೂರ್ತಿ’ಗಳನ್ನು ತಯಾರಿಸಲು ಆಹ್ವಾನಿಸುತ್ತಾರೆ. ಅವುಗಳಲ್ಲಿ ಕೆಲವು ಮೂರ್ತಿಗಳನ್ನು ಕಾಗದದ ಮುದ್ದೆಗಳಿಂದ ತಯಾರಿಸಲಾಗುತ್ತದೆ. ಇದು ಅಶಾಸ್ತ್ರೀಯವಂತೂ ಆಗಿದೆ, ಹಾಗೆಯೇ ಪರಿಸರಕ್ಕೆ ಹಾನಿಕರಕವೂ ಆಗಿದೆ.

ಏಕೆಂದರೆ ಕಾಗದದ ಮುದ್ದೆಗಳು ನೀರಿನಲ್ಲಿರುವ ಪ್ರಾಣವಾಯುವನ್ನು ಹೀರುತ್ತವೆ ಮತ್ತು ಜೀವಗಳಿಗೆ ಹಾನಿಕರವಾದ ‘ಮಿಥೇನ್’ ವಾಯುವನ್ನು ನಿರ್ಮಿಸುತ್ತವೆ. ಇಂತಹ ಸಂಸ್ಥೆಗಳಿಂದ ಮಾಡಲಾಗಿರುವ ನಿಸರ್ಗದ ವಿಚಾರವು ಕೇವಲ ಮೇಲುಮೇಲಿನದ್ದಾಗಿರುತ್ತದೆ. ಹಿಂದೂ ಧರ್ಮಶಾಸ್ತ್ರವು ನಿಸರ್ಗದ ರಕ್ಷಣೆಯೊಂದಿಗೆ ಮಾನವನ ಸರ್ವಾಂಗೀಣ ಉನ್ನತಿಯ ವಿಚಾರವನ್ನೂ ಮಾಡಿರುತ್ತದೆ ಎಂಬುದನ್ನು ಗಮನದಲ್ಲಿಡಿ.

ಧರ್ಮಶಾಸ್ತ್ರಕ್ಕನುಸಾರ ತರಬೇಕಾದ ಜೇಡಿಮಣ್ಣಿನ ಮೂರ್ತಿಯು ದುಬಾರಿಯಾಗಿರುತ್ತದೆ. ಈ ರೀತಿ ಹೇಳುವುದು ಕುಂಟುನೆಪವಾಗಿದೆ. ಪ್ರತಿಯೊಂದು ಕುಟುಂಬದಲ್ಲಿ ಗಣೇಶೋತ್ಸವಕ್ಕಾಗಿ ಆಗುವ ಒಟ್ಟು ಖರ್ಚಿನಲ್ಲಿಮೂರ್ತಿಯ ಖರೀದಿಗಾಗಿ ಆಗುವ ಖರ್ಚು ಅತ್ಯಲ್ಪವಾಗಿರುತ್ತದೆ.

ಶ್ರೀ ಗಣೇಶನನ್ನು ಪೂಜಿಸುವುದರ ಉದ್ದೇಶವು ಕುಟುಂಬದಲ್ಲಿನ ಸದಸ್ಯರಿಗೆ ಮೂರ್ತಿಯಿಂದ ಗಣೇಶತತ್ತ್ವ ಸಿಗುವುದಾಗಿದೆ. ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯಿಂದ ಈ ಲಾಭ ಸಿಗುವುದು ಸಾಧ್ಯವಿಲ್ಲ. ಗಣೇಶಭಕ್ತರೇ, ಮೂರ್ತಿಯ ಖರ್ಚಿನ ಪ್ರಶ್ನೆಯಿದ್ದರೆ, ಚಿಕ್ಕ ಮೂರ್ತಿಯನ್ನು ತೆಗೆದುಕೊಳ್ಳಿರಿ; ಆದರೆ ತುಲನೆಯಲ್ಲಿ ಅಗ್ಗವಾಗಿದೆ ಎಂದು ‘ಪ್ಲಾಸ್ಟರ್ ಆಫ್ ಪ್ಯಾರಿಸ್’ನ ಮೂರ್ತಿಯನ್ನು ಕೊಳ್ಳುವ ಧರ್ಮಶಾಸ್ತ್ರವಿರೋಧಿ ವರ್ತನೆಯನ್ನು ಮಾಡಬೇಡಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೋಟ್ ಮಾಡಿ ಎಂದಿದಕ್ಕೆ ಮಂಗಳಾರತಿ ಮಾಡಿಸಿಕೊಂಡ ಮೋಹಕ ತಾರೆ ರಮ್ಯಾ..

    ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ. ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು. ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು…

  • ಉಪಯುಕ್ತ ಮಾಹಿತಿ, ಸಿನಿಮಾ

    ತನ್ನ ನೆಚ್ಚಿನ ನಟಿಯ ಮೇಲಿನ ಆಭಿಮಾನದಿಂದ,ಹೇಗಿದ್ದವಳು ,ಹೇಗಾಗಿದ್ದಾಳೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ರಾಜಕೀಯ

    ರಾಜ್ಯದಲ್ಲಿ ಯಾವ ಯಾವ ಪಕ್ಷ ಮುನ್ನಡೆ…?

    ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ಕ್ಷಣಗಳು ಬಾಕಿಯಿದೆ. ಆರಂಭಿಕ ಮತ ಎಣಿಕೆಯಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿದ್ದರೆ ಯುಪಿಎ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಬಲ ಪಡೆದಿರುವ ರಾಜ್ಯಗಳಲ್ಲಿ ಕೂಡ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಪ್ರದೇಶದ 54 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 27, ರಾಜಸ್ತಾನದಲ್ಲಿ 23 ಹಾಗೂ ಬಿಹಾರದಲ್ಲಿ ಬಿಜೆಪಿ 32 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಮಹಾರಾಷ್ಟ್ರದಲ್ಲಿ ಬಿಜೆಪಿ 40, ಗುಜರಾತಿನಲ್ಲಿ ಬಿಜೆಪಿ 26, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 22 ಕ್ಷೇತ್ರಗಳಲ್ಲಿ ಮುನ್ನಡೆ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…