ಕಾನೂನು

ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

121

ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

ವೀಕ್ ಎಂಡ್ ಬಂದರೆ ಸಾಕು ಎಂಜಿ ರೋಡ್, ಬ್ರಿಗೇಡ್ ರೋಡ್ ಮತ್ತು ಚರ್ಜ್ ಸ್ಟ್ರೀಟ್ ನಲ್ಲಿ ಪಾರ್ಕಿಂಗ್ ಸಮಸ್ಯೆ ಇರುತ್ತದೆ. ರಜೆ ದಿನಗಳಲ್ಲಿ ಮಹಿಳೆಯರು ಪತಿ ಮತ್ತು ಮಕ್ಕಳ ಜೊತೆ ಸುತ್ತಾಡಿಕೊಂಡು ಶಾಂಪಿಗ್ ಮಾಡಿ, ಊಟ ಮಾಡಿಕೊಂಡು ಬರೋಣ ಅಂದುಕೊಂಡಿರುತ್ತಾರೆ. ಆದ್ರೆ ಸಾಮಾನ್ಯವಾಗಿ ಎಲ್ಲಾ ಕಡೆ ಪಾರ್ಕಿಂಗ್ ಸಮಸ್ಯೆ ಇದ್ದಿದ್ದೇ. ಇದಕ್ಕೆಲ್ಲ ಪರಿಹಾರ ನೀಡಬೇಕೆಂದು ಬಿಬಿಎಂಪಿ, ಮಹಿಳೆಯರಿಗೆ ಪಾರ್ಕಿಂಗ್ ರಿಸರ್ವೇಷನ್ ವ್ಯವಸ್ಥೆಯನ್ನು ನೀಡಲು ಮುಂದಾಗಿದೆ.

ನಗರದಲ್ಲಿ ಮಹಿಳೆಯರಿಗೆ ವಾಹನ ನಿಲುಗಡೆಯಲ್ಲಿ ಮೀಸಲಾತಿ ನೀಡುವುದಕ್ಕೆ ಬಿಬಿಎಂಪಿ ಯೋಜನೆ ರೂಪಿಸಿದ್ದು, ಮೊಟ್ಟ ಮೊದಲ ಬಾರಿಗೆ ಬ್ರಿಗೇಡ್ ರಸ್ತೆಯಲ್ಲಿ ಚಾಲನೆಗೆ ತರಲಾಗಿದೆ. ಬ್ರಿಗೇಡ್ ರಸ್ತೆಯಲ್ಲಿ ಮಹಿಳೆಯರಿಗೆ ಶೇಕಾಡ. 20 ರಷ್ಟು ಪಾರ್ಕಿಂಗ್ ರಿಸರ್ವೆಷನ್ ನೀಡಲಾಗಿದೆ. ಇದರಿಂದ ತುಂಬಾ ಸಂತಸವಾಗಿದೆ ಎಂದು ವಾಹನ ಸವಾರರಾದ ವಿದ್ಯಾ ಹೇಳಿದ್ರು.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಪಾರ್ಕಿಂಗ್ ನಲ್ಲಿ ರಿಸರ್ವೇಷನ್ ನೀಡುವ ಯೋಜನೆ ಉತ್ತಮವಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ಭಾಗಗಳಲ್ಲೂ ಈ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕೆನ್ನುವ ಆಶಾಯವಿದೆ ಎಂದು ಬಿಬಿಎಂಪಿ ಮೇಯರ್ ಸಂಪತ್ ರಾಜ್ ತಿಳಿಸಿದ್ರು.

ಈ ಮಾಹಿತಿಯನ್ನು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಟ್ವೀಟರ್‌ನಲ್ಲಿ ಟ್ವೀಟ್ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಪಾರ್ಕಿಂಗ್ ಶುಲ್ಕ ವ್ಯವಸ್ಥೆ ಜಾರಿಗೆ ಬರುವ 85 ಪ್ರಮುಖ ರಸ್ತೆಗಳಿಗೆ ಈ ಮೀಸಲು ವ್ಯವಸ್ಥೆ ವಿಸರಿಸಲಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೇಹದ ಕೆಟ್ಟ ಕೊಬ್ಬು ಕರಗಬೇಕೆಂದರೆ ದಿನ ನಿತ್ಯ ಈ ಹಣ್ಣನ್ನು ತಿಂದರೆ ಸಾಕು,.!

    ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ  ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ  ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ  ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…