ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ.
ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಸಹಾಯಧನ ಯೋಜನೆ ಜಾರಿಗೆ ತಂದಿದ್ದು, ಬ್ಯಾಂಕ್ಗಳು ನೀಡುವ ಸಾಲಕ್ಕೆ ನಿಗಮದಿಂದ ಸಹಾಯಧನ ನೀಡಲಾಗುತ್ತದೆ.
ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ‘ಉದ್ಯೋಗಿನಿ’ ಯೋಜನೆಯಲ್ಲಿ ಮಹತ್ತರ ಬದಲಾವಣೆ ತಂದಿರುವ ರಾಜ್ಯ ಸರ್ಕಾರ 3 ಲಕ್ಷದವರೆಗೆ ಸಾಲ ಕೊಡಲಿದೆ.ಇದರ ಜೊತೆಗೆ ಫಲಾನುಭವಿಗಳು 90,000 ರೂ.ವರೆಗೆ ಸಬ್ಸಿಡಿ ಸಹ ಪಡೆಯಬಹುದು.
*ವಾರ್ಷಿಕ 1.5 ಲಕ್ಷ ರೂ ಒಳಗೆ ಆದಾಯ ಹೊಂದಿರಬೇಕು.
*18 ರಿಂದ 55 ವರ್ಷದೊಳಗಿನ ಎಲ್ಲಾ ಮಹಿಳೆಯರು ಅರ್ಹರು.
*ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ.
ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಸಿಹಿ ಅಂಗಡಿ, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ ಇನ್ನೂ ಹಲವು ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.
ಇದಕ್ಕಾಗಿ ಸರ್ಕಾರ ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಸಾಲ ನೀಡಲಾಗುವುದು. ಇದರಲ್ಲಿ 90,000 ರೂ. ಗಳನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಭರಿಸಲಿದೆ.ನಿಮ್ಮ ನಿಮ್ಮ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳಲ್ಲಿ ನೀವು ಅರ್ಜಿಯನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….