ಸುದ್ದಿ

ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

41

ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ ಸರ್ಕಾರ ಇದನ್ನು 2200ರಿಂದ 2500ರವರೆಗೆ ಏರಿಕೆ ಮಾಡಲು ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಯಡಿಯೂರಪ್ಪನವರು ಈಗಾಗಲೇ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ವೆಚ್ಚ ಏರಿಕೆ ಮಾಡುವ ಸಂಬಂಧ ಸಾಧಕ-ಬಾಧಕಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ/ ವರ್ಗ , ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ನಿಲಯಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುವಂತಾಗಿದೆ ಎಂದು ಈ ಹಿಂದೆ ಬಿಜೆಪಿಯೇ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಶೌಚಾಲಯ, ವಿದ್ಯಾರ್ಥಿಗಳ ಕೊಠಡಿ, ಹಾಸಿಗೆ, ದಿಂಬು,ಊಟದ ತಟ್ಟೆ, ಅಡುಗೆ ಮನೆ ಸೇರಿದಂತೆ ವಿದ್ಯಾರ್ಥಿ ನಿಲಯಗಳಲ್ಲಿ ಕನಿಷ್ಠ ಸೌಲಭ್ಯಗಳು ಇಲ್ಲದೆ ವಿದ್ಯಾರ್ಥಿಗಳು ಸಮಸ್ಯೆಗೆ ಸಿಲುಕಿದ್ದಾರೆ. ಜೊತೆಗೆ ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ ನೀಡುತ್ತಿರುವ ಹಣ ಯಾವುದಕ್ಕೂ ಸಾಲದು ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ವಾರ್ಷಿಕ ವೆಚ್ಚವನ್ನು ಏರಿಕೆ ಮಾಡುವುದು ಹಾಗೂ ವಿದ್ಯಾರ್ಥಿ ನಿಲಯಗಳ ಉನ್ನತೀಕರಣಕ್ಕೂ ಗಮನಹರಿಸಿದೆ. 2018-19ರ ಅವಧಿಯಲ್ಲಿ 250 ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ 1,88,500 ವಿದ್ಯಾರ್ಥಿಗಳಿಗೆ ಹೊಂದಾಣಿಕೆ ಮಾಡುವುದೇ ಅಧಿಕಾರಿಗಳಿಗೆ ಸಮಸ್ಯೆಯಾಗಿತ್ತು.

ಕನಿಷ್ಟ ಪಕ್ಷ ಇನ್ನು 250 ಕೋಟಿ ಅನುದಾನ ನೀಡಬೇಕೆಂದು ಇಲಾಖೆ ಅಧಿಕಾರಿಗಳೇ ಮನವಿ ಮಾಡಿದ್ದರು. ಇದೀಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರುವುದರಿಂದ ಹಾಸ್ಟೆಲ್‍ಗಳ ಉನ್ನತೀಕರಣ, ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವುದು, ಸುರಕ್ಷತೆ, ಹಾಸ್ಟೆಲ್‍ಗಳಲ್ಲಿ ಅನಗತ್ಯವಾಗಿ ಬೀಡುಬಿಟ್ಟಿರುವ ವಿದ್ಯಾರ್ಥಿಗಳಲ್ಲದವರನ್ನು ಖಾಲಿ ಮಾಡಿಸುವುದು, ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಶೀಘ್ರ ಆದೇಶವನ್ನು ಹೊರಡಿಸಲಿದ್ದಾರೆ ಎಂದು ತಿಳಿದುಬಂದಿದೆ. ವೆಚ್ಚ ಹೆಚ್ಚಳ ಮಾಡುವುದರಿಂದ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ವೆಚ್ಚವಾಗಬಹುದು. ಆದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದನ್ನು ತುರ್ತಾಗಿ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಾಪತ್ತೆಯಾಗಿ ಮೂರು ವರ್ಷದ ನಂತರ ಟಿಕ್ ಟಾಕ್ ನಲ್ಲಿ ಪತ್ತೆಯಾದ ಪತಿ!

    ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಪ್ರೇಮ

    ಆಕೆ ನನಗೆ ಸ್ವಲ್ಪ ಉಸಿರಾಟದ ತೊಂದರೆಯಾಗಿದೆ ಎಂದಳು – ಒಂದು ಪ್ರೆಮ ಕಥೆ 2 ನಿಮಿಷ ಸಮಯ ವಿದ್ದರೆ ಓದಿ

    ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.

  • ಸುದ್ದಿ

    ನಮ್ಮ ವೀರ ಯೋಧರ ದಾಳಿಯ ಭೀತಿಯಿಂದ ಓಡಿಹೋದ ಶಿಖಂಡಿ ಉಗ್ರರು…

    ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿ.ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ಆತ್ಮಾಹುತಿ ದಾಳಿ ನಡೆದು 42 ಮಂದಿ ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಉಗ್ರಗಾಮಿಗಳು ಹಾಗೂ ಅವರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಕೂಗು ಭಾರತದಾದ್ಯಂತ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಕೂಡ ಈಗಾಗಲೇ ಇದಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಕೈಬಿಟ್ಟಿದೆಯಲ್ಲದೆ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಶೇಕಡ 200 ರಷ್ಟು ಸುಂಕ ವಿಧಿಸುವ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…