ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ.

ಇವರ ಆಪ್ತರು ಹಾಗೂ ಹಿರಿಯ ಮುಖಂಡರಾದ ರಮೇಶ್‍ಕುಮಾರ್ ಕೂಡ ಸದಾ ಎಚ್ಚರಿಸುತ್ತಿದ್ದಾರೆ. ಹಾಗಾಗಿ ಸಿದ್ದರಾಮಯ್ಯನವರು ಯಾವುದೇ ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ. ಎಲ್ಲರೊಂದಿಗೆ ಸಮಾಲೋಚನೆ ನಡೆಸಿ ಚರ್ಚೆಗೆ ಮುಂದಾಗುತ್ತಿದ್ದಾರೆ. ಪ್ರತಿಪಕ್ಷ ಬಿಜೆಪಿಯನ್ನು ಯಾವ ರೀತಿ ಕಟ್ಟಿಹಾಕಬೇಕೆಂಬ ಸಲಹೆಗಳನ್ನು ಪಡೆದು ಹೆಜ್ಜೆ ಇಡುತ್ತಿದ್ದಾರೆ.

ಮುಂಬರುವ ಉಪಚುನಾವಣೆಯ ಹೊಣೆ ಕೂಡ ಇವರ ಹೆಗಲ ಮೇಲಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೆಚ್ಚಿನ ಸ್ಥಾನಗಳನ್ನು ಪಡೆಯುವುದು ಇವರ ಉದ್ದೇಶವಾಗಿದೆ. ಈಗಾಗಲೇ ಹಿರಿಯ ಕಾಂಗ್ರೆಸ್ ನಾಯಕರು ಇವರ ವಿರುದ್ಧ ಕತ್ತಿ ಮಸೆದಿದ್ದರು. ಅಲ್ಲದೆ ಹೈಕಮಾಂಡ್‍ಗೆ ದೂರು ಕೂಡ ನೀಡಿದ್ದರು. ಹಾಗಾಗಿ ಅವೆಲ್ಲವನ್ನೂ ಸಿದ್ದು ಮೆಟ್ಟಿ ನಿಲ್ಲಬೇಕಾದ ಹಿನ್ನೆಲೆಯಲ್ಲಿ ಈಗ ತಮ್ಮ ವರಸೆ ಬದಲಿಸಿ ಎಲ್ಲರೊಟ್ಟಿಗೆ ಹೆಜ್ಜೆ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…