ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್‌ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು. ಸದ್ಯದ ಪರಿಸ್ಥಿತಿ ನೋಡಿದರೆ ಮೀಡಿಯಂ ಹೀರೋ ಸಹ ಒಂದೊಂದು ಸಿನಿಮಾಗೆ 10 ಲಕ್ಷಕ್ಕೂ ಹೆಚ್ಚು ಬಟ್ಟೆಗಳನ್ನು ಖರ್ಚು ಮಾಡಿಸುತ್ತಿದ್ದಾನೆ.

ಹೀರೋಯಿನ್ ಸಂಗತಿಗೆ ಬಂದರೆ ಕಾಜಲ್‌ಗಾದರೆ ಒಂದು ಸಿನಿಮಾಗೆ 35 ರಿಂದ 40 ಲಕ್ಷಗಳ ವರೆಗೆ ಬಟ್ಟೆಗೇ ಖರ್ಚಾಗುತ್ತದೆ. ಇದೆಲ್ಲಾ ಸರಿ ಸಿನಿಮಾಗಾಗಿ ಇಷ್ಟೆಲ್ಲಾ ದುಡ್ಡು ಸುರಿದು ಬಟ್ಟೆಗಳನ್ನು ಕೊಳ್ಳುತ್ತಿದ್ದಾರಲ್ಲ, ಸಿನಿಮಾ ಮುಗಿದ ಮೇಲೆ ಈ ಬಟ್ಟೆಗಳನ್ನು ಏನು ಮಾಡುತ್ತಾರೆ? ಕೆಲವು ಮಂದಿ ನಿರ್ಮಾಪಕರು ಗೋಡೌನ್‌ನಲ್ಲಿ ಬಿಸಾಕುತ್ತಾರೆ. ಇನ್ನೂ ಕೆಲವು ನಿರ್ಮಾಪಕರು ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ. ಸುಮಾರು 50 ಲಕ್ಷದ ಬಟ್ಟೆಗಳನ್ನು 5 ಲಕ್ಷಕ್ಕೆಲ್ಲಾ ಮಾರಿದ ಸಾಕಷ್ಟು ಉದಾಹರಣೆಗಳಿವೆ.

ಅದೇ ರೀತಿ ಸ್ಟಾರ್ ಹೀರೋ ಆದರೆ ಸುಮಾರು 30 ರಿಂದ 40 ಲಕ್ಷಗಳ ತನಕ ಬಟ್ಟೆಗಳಿಗೇ ಖರ್ಚಾಗುತ್ತದೆ. ಹಾಗಾಗಿ ನಿರ್ಮಾಪಕರು ಹೀರೋಗಳ ಜತೆಗೆ ಬಟ್ಟೆಗಳಿಗಾಗಿ ಪ್ಯಾಕೇಜ್ ಮಾತನಾಡಿಕೊಳ್ಳುತ್ತಿದ್ದಾರೆ. ಡಿಸೈನರ್‌ಗಳಿಗೆ ಬಜೆಟ್ ತಿಳಿಸಿ ಅಷ್ಟರೊಳಗೆ ಮುಗಿಸಬೇಕೆಂದು ಹೇಳುತ್ತಿದ್ದಾರೆ. ಡಿಸೈನರ್‌ಗಳು ಫಾರಿನ್‌ನಿಂದ ಬ್ರಾಂಡ್ಸ್ ತರಿಸಿ ಡಿಸೈನ್ ಮಾಡುತ್ತಿದ್ದಾರೆ.

ಕೆಲವು ಸಿನಿಮಾ ಕಾಸ್ಟ್ಯೂಮ್ಸ್‌ನವರು ಕೊಂಡು ಬ್ಯಾಕ್ ಗ್ರೌಂಡ್ ಕಲಾವಿದರಿಗೆ ಬಾಡಿಗೆಗೆ ನೀಡುತ್ತಿರುತ್ತಾರೆ. ಇನ್ನು ದೊಡ್ದ ದೊಡ್ದ ಜಾಕೆಟ್, ಶೂಸ್‍ನಂತಹವನ್ನು ಮುಂಬೈನಲ್ಲಿ ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲಿ ಮಾರುತ್ತಿರುತ್ತಾರೆ. ಹೀರೋಯಿನ್ ಸೀರೆಗಳಾದರೂ ಅಷ್ಟೇ.

ಒಂದು ವೇಳೆ ಯಾವುದಾದರೂ ಡ್ರೆಸ್ ಇಷ್ಟವಾದರೆ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀರೋಯಿನ್ ಸೀರೆ, ಒಡವೆ, ಚಪ್ಪಲಿ ಎಲ್ಲವನ್ನೂ ಸೆಕೆಂಡ್ಸ್‌ನಲ್ಲಿ ಮಾರುತ್ತಾರೆ.ಒಂದು ವೇಳೆ ದೊಡ್ಡ ನಿರ್ಮಾಪಕನಾಗಿದ್ದು ಸದಾ ಸಿನಿಮಾಗಳನ್ನು ನಿರ್ಮಿಸುತ್ತಿದ್ದರೆ ಗೋಡೌನ್‌ನಲ್ಲಿ ಇಟ್ಟುಕೊಂಡು ಅದನ್ನು ಪೋಷಕ ಕಲಾವಿದರಿಗೆ ಉಪಯೋಗಿಸುತ್ತಿತ್ತಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…