ಸುದ್ದಿ

ಸಿಲಿಕಾನ್ ಸಿಟಿ ಜನರೆ ಹುಷಾರ್ ದಟ್ಟಣೆ ತಟ್ಟಲಿದೆ ಬಿಸಿ ; ರಸ್ತೆಗಿಳಿಯುವ ಮುನ್ನ ಎಚ್ಚರ..ಎಚ್ಚರ…..!

43

ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಸುಮಾರು 10 ಸಾವಿರಕ್ಕೂ ಹೆಚ್ಚು ರೈತರು ಈ ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರೈತ ಸಂಘಟನೆಗಳ ವತಿಯಿಂದ ರೈಲು ನಿಲ್ದಾಣದಿಂದ ವಿಧಾನಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಬೆಂಗಳೂರಿನ ಹೃದಯ ಭಾಗಗಳಾದ ಮೆಜೆಸ್ಟಿಕ್, ಮಲ್ಲೇಶ್ವರಂ, ರೇಸ್ ಕೋರ್ಸ್ ರಸ್ತೆ, ಕೆಜಿ ರಸ್ತೆ, ಕಾರ್ಪೋರೇಷನ್ ಬಳಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.

ರೈತರ ಪ್ರತಿಭಟನೆ ಮತ್ತು ಜೆಡಿಎಸ್ ಪ್ರತಿಭಟನೆ ನಡೆಯಲಿರುವ ಹಿನ್ನಲೆಯಲ್ಲಿ ಭದ್ರತೆಗಾಗಿ ಸಿಆರ್ಪಿಎಫ್ ತುಕಡಿ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ವಿಧಾನಸೌಧ ಸುತ್ತಮುತ್ತ ಹಾಗೂ ಶೇಷಾದ್ರಿಪುರಂ ಬಳಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮುಖೇಷ್ ಅಂಬಾನಿ ತೆಗೆಯಲಿರುವ 1000 ಕೋಟಿ ಬಂಡವಾಳದ ಸಿನಿಮಾ ಯಾವುದು,ಅದಕ್ಕೆ ನಟ ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಬಾಲೀವುಡ್ ನಟ ಅಮೀರ್ ಖಾನ್ ಬಹಳ ವಿಜೃಂಭಣೆಯಿಂದ ಚಿತ್ರೀಕರಿಸುತ್ತಿರುವ ‘ ಮಹಾಭಾರತ್ ‘ ಸಿನಿಮಾ ಸರಣಿಗೆ ಸಂಬಂಧಿಸಿದಂತೆ ಒಂದು ಮುಖ್ಯವಾದ ವಿಷಯ ಹೊರಬಂದಿದೆ. 1000 ಕೋಟಿ ರೂಪಾಯಿಗಳ ಬಂಡವಾಳದೊಂದಿಗೆ ತೆರೆಯ ಮೇಲೆ ರಾರಾಜಿಸಲಿರುವ ಈ ಸಿನಿಮಾವನ್ನು ದೇಶದಲ್ಲೇ ಆಗರ್ಭ ಶ್ರೀಮಂತರಾದ , ರಿಲಯೆನ್ಸ್ ಇಂಡಸ್ಟ್ರೀಸ್ ಅಧಿನೇತ ಮುಖೇಷ್ ಅಂಬಾನಿ ಸಹ ನಿರ್ಮಾಪಕನಾಗಿ ಭಾಗವಹಿಸುತ್ತಿರುವಂತೆ ತಿಳಿದು ಬಂದಿದೆ. ನಾಲಕ್ಕರಿಂದ ಐದು ಭಾಗಗಳಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತದೆಂದು ತಿಳಿದು ಬಂದಿದೆ. ಬಹಳಷ್ಟು ನಿರ್ದೇಶಕರು ಈ ಚಿತ್ರದಲ್ಲಿ ಕೆಲಸಮಾಡುವ ಅವಕಾಶವಿದೆಯೆಂಬ ಸುದ್ದಿಯಿದೆ….

  • ಕರ್ನಾಟಕ

    ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    “ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಉಪಯುಕ್ತ ಮಾಹಿತಿ

    ಶಾಸ್ತ್ರದ ಪ್ರಕಾರ ಮಣ್ಣಿನ ಗಣೇಶ ಮೂರ್ತಿಯನ್ನೇ ಪೂಜಿಸಬೇಕು!ಇಲ್ಲಾಂದ್ರೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮತ್ತೆ ನಮ್ಮ ಗಣೇಶ ಬಂದ. ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ. ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬುಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.