ಸುದ್ದಿ

8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ನಾಯ್ಕರಿಂದ ಉಚಿತ ಬೈಸಿಕಲ್ ವಿತರಣೆ

29

ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು

ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ನೀಡುತ್ತಿರುವ ಉದ್ದೇಶ ಯಾಕೆಂದು ವಿದ್ಯಾರ್ಥಿಗಳು ಮೊದಲು ತಿಳಿದುಕೊಳ್ಳಬೇಕು. ವಿದ್ಯಾರ್ಥಿಗಳ ಶಿಕ್ಷಣದ ಮಟ್ಟ ಹೆಚ್ಚಿಸಲು ಮತ್ತು ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸಬೇಕೆಂಬ ಉದ್ದೇಶದಿಂದ ಸರಿಯಾದ ಸಮಯಕ್ಕೆ ಶಾಲೆಗೆ ಹೋಗಿ ತಲುಪಿಕೊಂಡು ವಿದ್ಯಾಭ್ಯಾಸದಿಂದ ವಂಚಿತರಾಗಬಾರದೆಂದು ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿಕೊಂಡು ಬರುತ್ತಿದ್ದೆ. ಅದರ ಸರಿಯಾದ ಉಪಯೋಗ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕಾಗಿದೆ. ವಿದ್ಯಾರ್ಥಿಗಳು ಸರ್ಕಾರ ನಿಮಗೆ ಉಚಿತವಾಗಿ ಸೈಕಲ್ ನೀಡುತ್ತಿದೆ ಎಂದು ತಿಳಿದುಕೊಳ್ಳ ಬೇಡಿ, ಅದು ನಿಮ್ಮ ಹಣ ಸಾರ್ವಜನಿಕರ ಹಣ ನಿಮ್ಮ ಹಣದಲ್ಲಿಯೇ ನಿಮಗೆ ಸೈಕಲ್ ನೀಡುತ್ತಿದ್ದಾರೆ ಆದರೆ ಇತ್ತೀಚಿನ ದಿನಗಳಲ್ಲಿ ಉಚಿತ ಸೈಕಲ್ ವಿತರಣೆಯಾದ ನಂತರ ಅದು ಹೆಚ್ಚಾಗಿ ದುರುಪಯೋಗವಾಗುತ್ತಿದೆ ವಿದ್ಯಾರ್ಥಿಗಳ ಹತ್ತಿರ ಇರದೇ ಬೇರೆ ವ್ಯಕ್ತಿಗಳು ಅದರ ಉಪಯೋಗ ಪಡೆಯುತ್ತಿರುತ್ತಾರೆ ಎಂದು ಹೇಳಿದರು

ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಪಂಚಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆಗೆ ಬರುವ ಉದ್ದೇಶಕ್ಕಾಗಿ ನೀಡುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳು ಇದರ ದುರುಪಯೋಗ ಪಡೆದುಕೊಳ್ಳದೆ ಶಾಲೆಗಳಿಗೆ ಮಾತ್ರ ಸೈಕಲ್ ತೆಗೆದುಕೊಂಡು ಹೋಗುವಂತೆ ಪಾಲಕರು ಸರಿಯಾಗಿ ಗಮನವಹಿಸಬೇಕು ಮತ್ತು ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕೂಡ ಮಕ್ಕಳು ಶಾಲೆಯಿಂದ ಮನೆಗೆ ಬಂದ ಮೇಲೆ ಅವರ ವಿದ್ಯಾಭ್ಯಾಸದ ಕಡೆ ಗಮನಹರಿಸಬೇಕೆಂದು ಹೇಳಿದರು

ನಂತರ ಬಸ್ ಪಾಸ್ ಮತ್ತು ಹಾಸ್ಟೆಲ್ ನಲ್ಲಿ ಇರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ  20 ಬಾಲಕರಿಗೆ  ಹಾಗೂ  26  ಬಾಲಕಿಯರಿಗೆ ಸೈಕಲಗಳನ್ನು ವಿತರಿಸಿದರು .ಇದಕ್ಕೂ ಪೂರ್ವದಲ್ಲಿ ಪ್ರೌಢಶಾಲೆಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳ ಮರುನಿರ್ಮಾಣ ಶೀರ್ಷಿಕೆಯಡಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸೋನಾರಕೇರಿ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಮತ್ತು ಕೃಷಿ ಇಲಾಖೆಯಲ್ಲಿ ರೈತ ಫಲಾನುಭವಿಗಳಿಗೆ ಕೃಷಿಗೆ ಸಂಬಂಧ ಪಟ್ಟ ಸಲಕರಣೆ ಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಂಡಲ ಘಟಕದ ಅಧ್ಯಕ ರಾಜೇಶ ನಾಯ್ಕ, ಜಿಲ್ಲಾ ಪಂಚಾಯತ ಸದಸ್ಯೆ ಸಿಂಧು ಭಾಸ್ಕರ್ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಘವೇಂದ್ರ ಶೇಟ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ಮುಂತಾದವರು ಉಪಸ್ಥಿತರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ರೆ ನೀವ್ ಶಾಕ್ ಆಗ್ತೀರಾ..!ನೋಡಲು ಇಲ್ಲಿ ಕ್ಲಿಕ್ ಮಾಡಿ…

    wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.