ರಾಜಕೀಯ

ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

227

ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.

ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ