ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.
ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ದಶಕಗಳ ಹಿಂದೆ ಅಪರ್ಣಾ ಎಂದರೇ ನೆನಪಾಗುವುದು ಅಚ್ಚ ಕನ್ನಡದಲ್ಲಿ ಮಾತನಾಡುವ ಹೆಮ್ಮೆಯ ಕನ್ನಡತಿ. 90ರ ದಶದಲ್ಲಿ ಡಿಡಿ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಲವು ಕಾರ್ಯಕ್ರಮಗಳ ನಿರೂಪಕರಾಗಿ ಕೆಲಸ ಮಾಡಿ ತಮ್ಮನ್ನು ತಾವು ಸ್ಥಾಪಿಸಿಕೊಂಡ್ಡಿದ್ದರು. ಅವರ ಅಚ್ಛ ಕನ್ನಡದ ನಿರೂಪಣೆ ಎಲ್ಲರಿಗೂ ಬಹಳ ಇಷ್ಟುವಾಗುತ್ತಿತ್ತು. ಅದೆಷ್ಟೋ ಜನರಿಗೆ ತಿಳಿದಿಲ್ಲ ಬೆಂಗಳೂರು ಮೆಟ್ರೊದಲ್ಲಿ ಮಾಡಿದ ಪ್ರಯಾಣಿಕರ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ನ ದಾಖಲೆಯ ಪ್ರಕಟಣೆಗಳಿಗಾಗಿ ಅಪರ್ಣಾ ಧ್ವನಿ ನೀಡಿದ್ದಾರೆ ಎಂಬುದು. ಕನ್ನಡದ ದಿಗ್ಗಜ ನಟರಾದ ಡಾ.ವಿಷ್ಣುವರ್ಧನ್, ಅಂಬರೀಶ್, ಆರತಿ, ಜೈಜಗದೀಶ್, ವಜ್ರಮುನಿ,…