ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.

ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್‌ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…