ಸಿನಿಮಾ

ಅಂಜನಿಪುತ್ರನಿಗೆ ಕೋರ್ಟ್ ಶಾಕ್..!

913

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.

ವಕೀಲ ಜಿ. ನಾರಾಯಣಸ್ವಾಮಿ ಅವರು ನಿರ್ದೇಶಕ, ನಿರ್ಮಾಪಕ, ಸೆನ್ಸಾರ್ ಬೋರ್ಡ್, ಫಿಲಂ ಚೇಂಬರ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಅರ್ಜಿ ವಿಚಾರಣೆಯನ್ನು ಶನಿವಾರ ನಡೆಸಿದ ಕೋರ್ಟ್ ಅಂಜನಿಪುತ್ರ ಸಿನಿಮಾ ಪ್ರದರ್ಶನ ಮಾಡದಂತೆ ಆದೇಶಿಸಿ ಜ. 2ಕ್ಕೆ ವಿಚಾರಣೆ ಮುಂದೂಡಿದೆ.

ಸಂಜೆ 7.30ರ ನಂತರ ರಾಜ್ಯಾದ್ಯಾಂತ ಎಲ್ಲಾ ಚಿತ್ರಮಂದರಿಗಳಲ್ಲಿ ಚಿತ್ರ ಪ್ರದರ್ಶನ ಸ್ಥಗಿತಗೊಳಿಸುವಂತೆ ಕೋರ್ಟ್ ಆದೇಶಿಸಿದೆ.

‘ನೀನು ಗಂಟೆ ಅಲ್ಲಾಡಿಸೋ ಹಾಗಿದ್ರೆ, ಕೋರ್ಟ್ ನಲ್ಲಿ ಅಲ್ಲಾಡ್ಸು. ಇಲ್ಲಿ ಅಲ್ಲಾಡಿಸಿದ್ರೆ ಕಟ್ ಮಾಡಿ ಬಿಡ್ತೀನಿ’ ಎಂದು ರವಿ ಶಂಕರ್ ಇನ್ಸ್ ಪೆಕ್ಟರ್ ಆಗಿ ವಕೀಲರಿಗೆ ಹೇಳುವ ದೃಶ್ಯ ಸಿನಿಮಾದಲ್ಲಿದೆ. ಈ ಸಂಭಾಷಣೆಯಿಂದ ವಕೀಲರಿಗೆ ಅವಮಾನವಾಗಿದೆ. ಹೀಗಾಗಿ ಒಂದೋ ಅಂಜನಿಪುತ್ರ ಸಿನಿಮಾ ಪ್ರದರ್ಶನ ರದ್ದು ಮಾಡಿ, ಇಲ್ಲವೇ ವಕೀಲರ ಬಗೆಗಿನ ಅವಹೇಳನಕಾರಿ ಮಾತನ್ನು ತೆಗೆಯುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹರ್ಷ ನಿರ್ದೇಶನದಲ್ಲಿ, ಎಮ್.ಎನ್.ಕುಮಾರ್ ನಿರ್ಮಾಣದಲ್ಲಿ ಅಂಜನಿಪುತ್ರ ಮೂಡಿಬಂದಿದ್ದು ಗುರುವಾರ ಬಿಡುಗಡೆಯಾಗಿತ್ತು.

ಚಿತ್ರದಲ್ಲಿ ರಮ್ಯಾಕೃಷ್ಣ, ರವಿಶಂಕರ್, ಚಿಕ್ಕಣ್ಣ ಸೇರಿದಂತೆ ಬಹುದೊಡ್ಡ ತಾರಾಗಣವಿದ್ದು, ನಟಿ ಹರಿಪ್ರಿಯಾ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪವರ್ ಸ್ಟಾರ್ ಗೆ ರಶ್ಮಿಕಾ ಮಂದಣ್ಣ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ