ಆರೋಗ್ಯ

ಅಂಜೂರ ಹಣ್ಣು ಮನುಷ್ಯನ ದೇಹಕ್ಕೆ ಎಷ್ಟೊಂದು ಲಾಭವಿದೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

By admin

February 14, 2018

ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.

 

ಅಂಜೂರದಿಂದ ಸಿಗುವಂತ ಪೌಷ್ಟಿಕಾಂಶಗಳು:-

ಇದೊಂದು ಪೌಷ್ಟಿಕವಾದ ಹಣ್ಣು. ಇದರಲ್ಲಿ ಎ, ಬಿ, ಸಿ ಮತ್ತು ಡಿ ಅನ್ನಾಂಗಗಳು ಇವೆ. ಮಾಂಸವನ್ನು ಬೇಗ ಕುದಿಸಲಿಕ್ಕೆ ಇದರ ಕಾಯಿಯನ್ನು ಸೇರಿಸುವರು..ಹಣ್ಣುಗಳಲ್ಲಿ ಅನೇಕ ಪೌಷ್ಠಿಕಾಂಶಗಳಿವೆ. ಸುಮಾರು 84ರಷ್ಟು ತಿರುಳಿರುತ್ತದೆ. ಹಣ್ಣುಗಳಲ್ಲಿ ಖನಿಜಾಂಶ ಮತ್ತು ಸಕ್ಕರೆಗಳಿರುವುದರಿಂದ ಪುಷ್ಟಿಕರವಾದ ಆಹಾರವೆನಿಸಿದ್ದು ಬೇಡಿಕೆ ಹೆಚ್ಚು.

ಕಬ್ಬಿಣದ ಮತ್ತು ತಾಮ್ರದ ಅಂಶ ಇತರ ಹಣ್ಣುಗಳಲ್ಲಿರುವುದಕ್ಕಿಂತಲೂ ಇವುಗಳಲ್ಲಿ ಹೆಚ್ಚಾಗಿವೆ. ಸತುವಿನ ಅಂಶವೂ ಸ್ವಲ್ಪ ಇರುತ್ತದೆ. ಎ ಮತ್ತು ಸಿ ಅನ್ನಾಂಗಗಳು ಹೆಚ್ಚು ಪ್ರಮಾಣದಲ್ಲೂ ಬಿ ಮತ್ತು ಡಿ ಅನ್ನಾಂಗಗಳು ಕಡಿಮೆ ಪ್ರಮಾಣದಲ್ಲೂ ಇರುತ್ತವೆ. ಇವುಗಳಲ್ಲದೆ ಸಿಟ್ರಿಕ್ ಮತ್ತು ಅಸಿಟಿಕ್ ಆಮ್ಲಗಳೂ ಇರುತ್ತವೆ.

ಅಂಜೂರದ ಔಷಧೀಯ ಗುಣಗಳು:-

ಇದೊಂದು ಔಷಧೀಯ ವಸ್ತುವೂ ಹೌದು ಅಂಜೂರದ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಹಣ್ಣು ಮೂತ್ರಸ್ರಾವಕ್ಕೆ ಉತ್ತೇಜನಕಾರಿ. ಹೆಚ್ಚುಕಾಲ ಬಳಸಿದರೆ ಆಹಾರದ ಕೊರತೆಯಿಂದ ರಕ್ತಹೀನತೆಯುಂಟಾಗುವುದನ್ನು ತಪ್ಪಿಸುತ್ತದೆ.ಫಸಲು ಬಂದಮೇಲೆ ಎಲೆಗಳನ್ನು ಕಿತ್ತು ದನಗಳಿಗೆ ಹಾಕುವುದುಂಟು.

ಗಿಣ್ಣು ಉತ್ಪನ್ನದಲ್ಲಿ ಅಂಜೂರದ ಹಾಲನ್ನು ಹೆಪ್ಪುಗಟ್ಟಿಸುವುದಕ್ಕೆ ಉಪಯೋಗಿಸುತ್ತಾರೆ. ಹಾಲು ಕರುಳಿನಲ್ಲಿರುವ ಜಂತುಹುಳುಗಳನ್ನು ನಾಶಮಾಡುತ್ತದೆ. ಹಣ್ಣನ್ನು ಪೋಲ್ಟೀಸುಮಾಡಿ ಕೀವು ಬರುವ ಗಾಯಕ್ಕೆ ಕಟ್ಟುತ್ತಾರೆ. ಚರ್ಮದಮೇಲೆ ಹಾಲು ಬಿದ್ದರೆ ಗಂದೆ ಮತ್ತು ಗುಳ್ಳೆಗಳಾಗುತ್ತದೆ. ಆಲ್ಕೋಹಾಲ್ ನೀರಿನಲ್ಲಿ ಇವು ಕರಗುತ್ತವೆ